يس
ಕನ್ನಡ Translation with Arabic Quran Text
| ಕನ್ನಡ | العربية |
|---|---|
| 1 ಯಾಸೀನ್. | يسٓ. ﴿1﴾ |
| 2 ವಿವೇಕಪೂರ್ಣವಾದ ಕುರ್‌ಆನಿನ ಮೇಲಾಣೆ. | وَٱلْقُرْءَانِ ٱلْحَكِيمِ. ﴿2﴾ |
| 3 ನಿಶ್ಚಯವಾಗಿಯೂ ನೀವು ಸಂದೇಶವಾಹಕರುಗಳಲ್ಲಿ ಒಬ್ಬರಾಗಿದ್ದೀರಿ. | إِنَّكَ لَمِنَ ٱلْمُرْسَلِينَ. ﴿3﴾ |
| 4 ನೀವು ನೇರ ಮಾರ್ಗದಲ್ಲಿದ್ದೀರಿ. | عَلَىٰ صِرَٰطٍۢ مُّسْتَقِيمٍۢ. ﴿4﴾ |
| 5 ಈ ಕುರ್‌ಆನ್ ಪ್ರಬಲನು ಮತ್ತು ಕರುಣಾನಿಧಿಯಾದ ಅಲ್ಲಾಹನಿಂದ ಅವತೀರ್ಣವಾಗಿದೆ. | تَنزِيلَ ٱلْعَزِيزِ ٱلرَّحِيمِ. ﴿5﴾ |
|
6
ನೀವು ಈ ಜನರಿಗೆ ಎಚ್ಚರಿಕೆ ನೀಡಲೆಂದು. ಅವರ ಪೂರ್ವಜರಿಗೆ ಯಾರೂ ಎಚ್ಚರಿಕೆ ನೀಡಿಲ್ಲ. ಆದ್ದರಿಂದ ಅವರು ನಿರ್ಲಕ್ಷ್ಯದಲ್ಲಿದ್ದಾರೆ.[1]
[1] ಪ್ರವಾದಿ ಇಸ್ಮಾಈಲರ (ಅವರ ಮೇಲೆ ಶಾಂತಿಯಿರಲಿ) ಬಳಿಕ ಅರೇಬಿಯನ್ ಪರ್ಯಾಯ ದ್ವೀಪಕ್ಕೆ ಬೇರೆ ಪ್ರವಾದಿಗಳು ಬಂದಿರಲಿಲ್ಲ. ಆದ್ದರಿಂದ ಅವರು ಸತ್ಯಧರ್ಮದ ಬಗ್ಗೆ ಸಂಪೂರ್ಣ ಅಜ್ಞಾನದಲ್ಲಿದ್ದರು.
|
لِتُنذِرَ قَوْمًۭا مَّآ أُنذِرَ ءَابَآؤُهُمْ فَهُمْ غَٰفِلُونَ. ﴿6﴾ |
| 7 ಅವರಲ್ಲಿ ಹೆಚ್ಚಿನವರ ಮೇಲೂ ಶಿಕ್ಷೆಯ ವಚನವು ಖಾತ್ರಿಯಾಗಿದೆ. ಆದ್ದರಿಂದ ಅವರು ವಿಶ್ವಾಸವಿಡುವುದಿಲ್ಲ. | لَقَدْ حَقَّ ٱلْقَوْلُ عَلَىٰٓ أَكْثَرِهِمْ فَهُمْ لَا يُؤْمِنُونَ. ﴿7﴾ |
| 8 ನಾವು ಅವರ ಕೊರಳುಗಳಲ್ಲಿ ಸಂಕೋಲೆಗಳನ್ನು ಹಾಕಿದ್ದೇವೆ. ಅದು ಅವರ ಗಲ್ಲಗಳ ತನಕ ಇದೆ. ಆದ್ದರಿಂದ ಅವರು ತಲೆಯೆತ್ತಿಕೊಂಡೇ ಇರುತ್ತಾರೆ. | إِنَّا جَعَلْنَا فِىٓ أَعْنَٰقِهِمْ أَغْلَٰلًۭا فَهِىَ إِلَى ٱلْأَذْقَانِ فَهُم مُّقْمَحُونَ. ﴿8﴾ |
| 9 ನಾವು ಅವರ ಮುಂಭಾಗದಲ್ಲಿ ಒಂದು ಪರದೆಯನ್ನು ಮತ್ತು ಅವರ ಹಿಂಭಾಗದಲ್ಲಿ ಒಂದು ಪರದೆಯನ್ನು ಹಾಕಿ ಅವರನ್ನು ಮುಚ್ಚಿ ಬಿಟ್ಟಿದ್ದೇವೆ. ಆದ್ದರಿಂದ ಅವರಿಗೆ ನೋಡಲು ಸಾಧ್ಯವಾಗುವುದಿಲ್ಲ. | وَجَعَلْنَا مِنۢ بَيْنِ أَيْدِيهِمْ سَدًّۭا وَمِنْ خَلْفِهِمْ سَدًّۭا فَأَغْشَيْنَٰهُمْ فَهُمْ لَا يُبْصِرُونَ. ﴿9﴾ |
| 10 ನೀವು ಅವರಿಗೆ ಎಚ್ಚರಿಕೆ ನೀಡಿದರೂ ಅಥವಾ ಎಚ್ಚರಿಕೆ ನೀಡದಿದ್ದರೂ ಅವರ ಮಟ್ಟಿಗೆ ಅದು ಸಮಾನವಾಗಿದೆ. ಅವರು ವಿಶ್ವಾಸವಿಡುವುದಿಲ್ಲ. | وَسَوَآءٌ عَلَيْهِمْ ءَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ. ﴿10﴾ |
| 11 ಯಾರು ನಿಮ್ಮ ಉಪದೇಶವನ್ನು ಅನುಸರಿಸುತ್ತಾನೋ ಮತ್ತು ಪರಮ ದಯಾಳುವಾದ ಅಲ್ಲಾಹನನ್ನು ಅದೃಶ್ಯ ಸ್ಥಿತಿಯಲ್ಲಿ ಭಯಪಡುತ್ತಾನೋ ಅವನಿಗೆ ಮಾತ್ರ ನಿಮ್ಮ ಎಚ್ಚರಿಕೆ ಪ್ರಯೋಜನ ನೀಡುತ್ತದೆ. ಆದ್ದರಿಂದ ಅವನಿಗೆ ಕ್ಷಮೆ ಮತ್ತು ಉದಾರ ಪ್ರತಿಫಲದ ಸುವಾರ್ತೆಯನ್ನು ತಿಳಿಸಿ. | إِنَّمَا تُنذِرُ مَنِ ٱتَّبَعَ ٱلذِّكْرَ وَخَشِىَ ٱلرَّحْمَٰنَ بِٱلْغَيْبِ ۖ فَبَشِّرْهُ بِمَغْفِرَةٍۢ وَأَجْرٍۢ كَرِيمٍ. ﴿11﴾ |
| 12 ನಿಶ್ಚಯವಾಗಿಯೂ ನಾವು ಮೃತರಿಗೆ ಜೀವ ನೀಡುತ್ತೇವೆ. ಅವರು ಮುಂದಕ್ಕೆ ಕಳುಹಿಸಿದ ಕರ್ಮಗಳನ್ನು ಮತ್ತು ಅವರು ಹಿಂದೆಯೇ ಬಿಟ್ಟಿರುವ ಕರ್ಮಗಳನ್ನು ನಾವು ದಾಖಲಿಸಿಡುತ್ತೇವೆ. ನಾವು ಎಲ್ಲಾ ವಿಷಯಗಳನ್ನೂ ಒಂದು ಸ್ಪಷ್ಟ ಗ್ರಂಥದಲ್ಲಿ ದಾಖಲಿಸಿಟ್ಟಿದ್ದೇವೆ. | إِنَّا نَحْنُ نُحْىِ ٱلْمَوْتَىٰ وَنَكْتُبُ مَا قَدَّمُوا۟ وَءَاثَٰرَهُمْ ۚ وَكُلَّ شَىْءٍ أَحْصَيْنَٰهُ فِىٓ إِمَامٍۢ مُّبِينٍۢ. ﴿12﴾ |
| 13 ಅವರಿಗೆ ಒಂದು ಊರಿನ ನಿವಾಸಿಗಳ ಉದಾಹರಣೆಯನ್ನು ತಿಳಿಸಿಕೊಡಿ. ಅಲ್ಲಿಗೆ ಸಂದೇಶವಾಹಕರುಗಳು ಬಂದ ಸಂದರ್ಭ! | وَٱضْرِبْ لَهُم مَّثَلًا أَصْحَٰبَ ٱلْقَرْيَةِ إِذْ جَآءَهَا ٱلْمُرْسَلُونَ. ﴿13﴾ |
| 14 ನಾವು ಅವರ ಬಳಿಗೆ ಇಬ್ಬರು ಸಂದೇಶವಾಹಕರುಗಳನ್ನು ಕಳುಹಿಸಿದ್ದೆವು. ಆದರೆ ಅವರು ಆ ಇಬ್ಬರು ಸಂದೇಶವಾಹಕರನ್ನೂ ನಿಷೇಧಿಸಿದರು. ಆಗ ಅವರಿಗೆ ಬಲ ನೀಡುವುದಕ್ಕಾಗಿ ನಾವು ಮೂರನೆಯವರನ್ನು ಕಳುಹಿಸಿದೆವು. ಅವರು ಹೇಳಿದರು: “ನಿಶ್ಚಯವಾಗಿಯೂ ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆ.” | إِذْ أَرْسَلْنَآ إِلَيْهِمُ ٱثْنَيْنِ فَكَذَّبُوهُمَا فَعَزَّزْنَا بِثَالِثٍۢ فَقَالُوٓا۟ إِنَّآ إِلَيْكُم مُّرْسَلُونَ. ﴿14﴾ |
| 15 ಜನರು ಹೇಳಿದರು: “ನೀವು ನಮ್ಮಂತೆಯೇ ಇರುವ ಮನುಷ್ಯರಾಗಿದ್ದೀರಿ. ಪರಮ ದಯಾಳು (ಅಲ್ಲಾಹು) ಏನನ್ನೂ ಅವತೀರ್ಣಗೊಳಿಸಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿದ್ದೀರಿ.” | قَالُوا۟ مَآ أَنتُمْ إِلَّا بَشَرٌۭ مِّثْلُنَا وَمَآ أَنزَلَ ٱلرَّحْمَٰنُ مِن شَىْءٍ إِنْ أَنتُمْ إِلَّا تَكْذِبُونَ. ﴿15﴾ |
| 16 ಸಂದೇಶವಾಹಕರುಗಳು ಹೇಳಿದರು: “ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಲಾಗಿದೆಯೆಂದು ನಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ತಿಳಿದಿದೆ. | قَالُوا۟ رَبُّنَا يَعْلَمُ إِنَّآ إِلَيْكُمْ لَمُرْسَلُونَ. ﴿16﴾ |
| 17 ನಮ್ಮ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸುವುದು ಮಾತ್ರವಾಗಿದೆ.” | وَمَا عَلَيْنَآ إِلَّا ٱلْبَلَٰغُ ٱلْمُبِينُ. ﴿17﴾ |
| 18 ಜನರು ಹೇಳಿದರು: “ನಾವು ನಿಮ್ಮನ್ನು ಅಪಶಕುನವೆಂದು ಭಾವಿಸಿದ್ದೇವೆ. ನೀವು (ನಿಮ್ಮ ಧರ್ಮಪ್ರಚಾರವನ್ನು) ನಿಲ್ಲಿಸದಿದ್ದರೆ ನಾವು ನಿಮ್ಮನ್ನು ಖಂಡಿತ ಕಲ್ಲೆಸೆದು ಸಾಯಿಸುವೆವು ಮತ್ತು ನಿಮಗೆ ನಮ್ಮ ಕಡೆಯ ಯಾತನಾಮಯ ಶಿಕ್ಷೆಯನ್ನು ಅನುಭವಿಸಬೇಕಾಗಿ ಬರುವುದು.” | قَالُوٓا۟ إِنَّا تَطَيَّرْنَا بِكُمْ ۖ لَئِن لَّمْ تَنتَهُوا۟ لَنَرْجُمَنَّكُمْ وَلَيَمَسَّنَّكُم مِّنَّا عَذَابٌ أَلِيمٌۭ. ﴿18﴾ |
| 19 ಸಂದೇಶವಾಹಕರುಗಳು ಹೇಳಿದರು: “ನಿಮ್ಮ ಅಪಶಕುನವು ನಿಮ್ಮ ಜೊತೆಯಲ್ಲೇ ಇದೆ. ನಿಮಗೆ ಉಪದೇಶ ನೀಡಿದರೆ ನೀವು ಅದನ್ನು ಅಪಶಕುನ ಎನ್ನುತ್ತೀರಾ? ಅಲ್ಲ, ವಾಸ್ತವವಾಗಿ ನೀವು ಎಲ್ಲೆ ಮೀರಿದ ಜನರಾಗಿದ್ದೀರಿ.” | قَالُوا۟ طَٰٓئِرُكُم مَّعَكُمْ ۚ أَئِن ذُكِّرْتُم ۚ بَلْ أَنتُمْ قَوْمٌۭ مُّسْرِفُونَ. ﴿19﴾ |
| 20 ನಗರದ ತುತ್ತತುದಿಯಿಂದ ಒಬ್ಬ ವ್ಯಕ್ತಿ ಓಡುತ್ತಾ ಬಂದನು. ಅವನು ಹೇಳಿದನು: “ಓ ನನ್ನ ಜನರೇ! ನೀವು ಸಂದೇಶವಾಹಕರುಗಳನ್ನು ಅನುಸರಿಸಿರಿ. | وَجَآءَ مِنْ أَقْصَا ٱلْمَدِينَةِ رَجُلٌۭ يَسْعَىٰ قَالَ يَٰقَوْمِ ٱتَّبِعُوا۟ ٱلْمُرْسَلِينَ. ﴿20﴾ |
| 21 ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳದ ಮತ್ತು ಸನ್ಮಾರ್ಗದಲ್ಲಿರುವ ಇವರನ್ನು ಅನುಸರಿಸಿರಿ. | ٱتَّبِعُوا۟ مَن لَّا يَسْـَٔلُكُمْ أَجْرًۭا وَهُم مُّهْتَدُونَ. ﴿21﴾ |
| 22 ನನ್ನನ್ನು ಸೃಷ್ಟಿಸಿದವನನ್ನು ಆರಾಧಿಸದಿರಲು ನನಗೇನು ಹಕ್ಕಿದೆ? ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. | وَمَا لِىَ لَآ أَعْبُدُ ٱلَّذِى فَطَرَنِى وَإِلَيْهِ تُرْجَعُونَ. ﴿22﴾ |
| 23 ನಾನು ಅವನನ್ನು (ಅಲ್ಲಾಹನನ್ನು) ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಬೇಕೇ? ಪರಮ ದಯಾಳು (ಅಲ್ಲಾಹು) ನನಗೇನಾದರೂ ತೊಂದರೆ ಕೊಡಲು ಬಯಸಿದರೆ ಅವರು (ಆ ದೇವರುಗಳು) ಮಾಡುವ ಶಿಫಾರಸು ನನಗೆ ಸ್ವಲ್ಪವೂ ಪ್ರಯೋಜನವಾಗುವುದಿಲ್ಲ. ಅವರು ನನ್ನನ್ನು ರಕ್ಷಿಸುವುದೂ ಇಲ್ಲ. | ءَأَتَّخِذُ مِن دُونِهِۦٓ ءَالِهَةً إِن يُرِدْنِ ٱلرَّحْمَٰنُ بِضُرٍّۢ لَّا تُغْنِ عَنِّى شَفَٰعَتُهُمْ شَيْـًۭٔا وَلَا يُنقِذُونِ. ﴿23﴾ |
| 24 ಹಾಗೇನಾದರೂ ಆದರೆ, ನಾನು ಸ್ಪಷ್ಟವಾಗಿ ದಾರಿತಪ್ಪುವುದು ನಿಶ್ಚಿತ. | إِنِّىٓ إِذًۭا لَّفِى ضَلَٰلٍۢ مُّبِينٍ. ﴿24﴾ |
| 25 ನಿಶ್ಚಯವಾಗಿಯೂ ನಾನು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇನೆ. ಆದ್ದರಿಂದ ನೀವು ನನ್ನ ಮಾತಿಗೆ ಕಿವಿಗೊಡಿ.” | إِنِّىٓ ءَامَنتُ بِرَبِّكُمْ فَٱسْمَعُونِ. ﴿25﴾ |
| 26 ಆ ವ್ಯಕ್ತಿಯೊಡನೆ ಹೇಳಲಾಯಿತು: “ಸ್ವರ್ಗವನ್ನು ಪ್ರವೇಶಿಸಿ.” ಆ ವ್ಯಕ್ತಿ ಹೇಳಿದರು: “ನನ್ನ ಜನರು ಇದನ್ನು ತಿಳಿಯುತ್ತಿದ್ದರೆ ಎಷ್ಟು ಚೆನ್ನಾಗಿತ್ತು! | قِيلَ ٱدْخُلِ ٱلْجَنَّةَ ۖ قَالَ يَٰلَيْتَ قَوْمِى يَعْلَمُونَ. ﴿26﴾ |
|
27
ಅಂದರೆ, ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಕ್ಷಮಿಸಿದ್ದಾನೆ ಮತ್ತು ನನ್ನನ್ನು ಗಣ್ಯರಲ್ಲಿ ಸೇರಿಸಿದ್ದಾನೆಂದು.”[1]
[1] ಆ ಊರಿನ ಸತ್ಯನಿಷೇಧಿ ಜನರು ಆ ವ್ಯಕ್ತಿಯನ್ನು ಕೊಂದರು. ಮರಣದ ನಂತರವೂ ಆ ವ್ಯಕ್ತಿ ತನ್ನ ಜನರ ಹಿತಚಿಂತಕರಾಗಿದ್ದರೆಂದು ಅವರ ಈ ಮಾತುಗಳಿಂದ ಅರ್ಥಮಾಡಿಕೊಳ್ಳಬಹುದು.
|
بِمَا غَفَرَ لِى رَبِّى وَجَعَلَنِى مِنَ ٱلْمُكْرَمِينَ. ﴿27﴾ |
| 28 ಅವರ ಬಳಿಕ ಅವರ ಜನರ ಮೇಲೆ ನಾವು ಆಕಾಶದಿಂದ ಯಾವುದೇ ಸೈನ್ಯವನ್ನು ಇಳಿಸಲಿಲ್ಲ. ನಾವು ಆ ರೀತಿ ಇಳಿಸುವವರೂ ಅಲ್ಲ. | ۞ وَمَآ أَنزَلْنَا عَلَىٰ قَوْمِهِۦ مِنۢ بَعْدِهِۦ مِن جُندٍۢ مِّنَ ٱلسَّمَآءِ وَمَا كُنَّا مُنزِلِينَ. ﴿28﴾ |
| 29 ಅದು ಒಂದು ಮಹಾ ಚೀತ್ಕಾರ ಮಾತ್ರವಾಗಿತ್ತು. ಆಗ ಹಠಾತ್ತನೆ ಅವರೆಲ್ಲರೂ ಸರ್ವನಾಶವಾದರು. | إِن كَانَتْ إِلَّا صَيْحَةًۭ وَٰحِدَةًۭ فَإِذَا هُمْ خَٰمِدُونَ. ﴿29﴾ |
| 30 ಅಯ್ಯೋ ನನ್ನ ದಾಸರೇ! ಅವರ ಬಳಿಗೆ ಸಂದೇಶವಾಹಕರು ಬಂದಾಗಲೆಲ್ಲಾ ಅವರು ಆ ಸಂದೇಶವಾಹಕರನ್ನು ತಮಾಷೆ ಮಾಡುತ್ತಲೇ ಇದ್ದರು. | يَٰحَسْرَةً عَلَى ٱلْعِبَادِ ۚ مَا يَأْتِيهِم مِّن رَّسُولٍ إِلَّا كَانُوا۟ بِهِۦ يَسْتَهْزِءُونَ. ﴿30﴾ |
| 31 ಏನು ಅವರು ನೋಡಿಲ್ಲವೇ? ಅವರಿಗಿಂತ ಮೊದಲು ನಾವು ಎಷ್ಟೆಷ್ಟು ತಲೆಮಾರುಗಳನ್ನು ನಾಶ ಮಾಡಿದ್ದೇವೆ ಮತ್ತು ಅವರಲ್ಲಿ ಯಾರೂ ಇವರ ಬಳಿಗೆ ಮರಳಿ ಬರುವುದಿಲ್ಲವೆಂದು. | أَلَمْ يَرَوْا۟ كَمْ أَهْلَكْنَا قَبْلَهُم مِّنَ ٱلْقُرُونِ أَنَّهُمْ إِلَيْهِمْ لَا يَرْجِعُونَ. ﴿31﴾ |
| 32 ನಿಶ್ಚಯವಾಗಿಯೂ ಅವರಲ್ಲಿ ಯಾರನ್ನೂ ಬಿಡದೆ ಎಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುವುದು. | وَإِن كُلٌّۭ لَّمَّا جَمِيعٌۭ لَّدَيْنَا مُحْضَرُونَ. ﴿32﴾ |
| 33 ಬರಡು ಭೂಮಿಯು ಅವರಿಗೊಂದು ದೃಷ್ಟಾಂತವಾಗಿದೆ. ನಾವು ಅದಕ್ಕೆ ಜೀವವನ್ನು ನೀಡಿದೆವು ಮತ್ತು ಅದರಿಂದ ಧಾನ್ಯವನ್ನು ಉತ್ಪಾದಿಸಿದೆವು. ಅವರು ಅದರಿಂದ ತಿನ್ನುತ್ತಿದ್ದಾರೆ. | وَءَايَةٌۭ لَّهُمُ ٱلْأَرْضُ ٱلْمَيْتَةُ أَحْيَيْنَٰهَا وَأَخْرَجْنَا مِنْهَا حَبًّۭا فَمِنْهُ يَأْكُلُونَ. ﴿33﴾ |
| 34 ನಾವು ಅಲ್ಲಿ ಖರ್ಜೂರ ಮತ್ತು ದ್ರಾಕ್ಷಿಗಳ ತೋಟಗಳನ್ನು ಮಾಡಿಕೊಟ್ಟೆವು. ನಾವು ಅದರಲ್ಲಿ ಚಿಲುಮೆಗಳನ್ನೂ ಹರಿಸಿದೆವು. | وَجَعَلْنَا فِيهَا جَنَّٰتٍۢ مِّن نَّخِيلٍۢ وَأَعْنَٰبٍۢ وَفَجَّرْنَا فِيهَا مِنَ ٱلْعُيُونِ. ﴿34﴾ |
| 35 ಅವರು ಅದರ ಹಣ್ಣುಗಳನ್ನು ತಿನ್ನಲೆಂದು. ಅದನ್ನು ಅವರ ಕೈಗಳು ಉತ್ಪಾದಿಸಿಲ್ಲ. ಆದರೂ ಅವರು ಕೃತಜ್ಞರಾಗುವುದಿಲ್ಲವೇ? | لِيَأْكُلُوا۟ مِن ثَمَرِهِۦ وَمَا عَمِلَتْهُ أَيْدِيهِمْ ۖ أَفَلَا يَشْكُرُونَ. ﴿35﴾ |
| 36 ಭೂಮಿ ಉತ್ಪಾದಿಸುವ ಸಸ್ಯಲತಾದಿಗಳು, ಅವರ (ಮನುಷ್ಯರ) ವರ್ಗಗಳು ಮತ್ತು ಅವರಿಗೆ ತಿಳಿದಿಲ್ಲದ ವಸ್ತುಗಳು ಮುಂತಾದ ಎಲ್ಲದರಲ್ಲೂ ಜೋಡಿಗಳನ್ನು ಸೃಷ್ಟಿಸಿದ ಅಲ್ಲಾಹು ಪರಿಶುದ್ಧನಾಗಿದ್ದಾನೆ. | سُبْحَٰنَ ٱلَّذِى خَلَقَ ٱلْأَزْوَٰجَ كُلَّهَا مِمَّا تُنۢبِتُ ٱلْأَرْضُ وَمِنْ أَنفُسِهِمْ وَمِمَّا لَا يَعْلَمُونَ. ﴿36﴾ |
| 37 ರಾತ್ರಿ ಅವರಿಗೆ ಒಂದು ದೃಷ್ಟಾಂತವಾಗಿದೆ. ನಾವು ಅದರಿಂದ ಹಗಲನ್ನು ಎಳೆದು ತೆಗೆಯುತ್ತೇವೆ. ಆಗ ಅಗೋ! ಅವರು ಇರುಳಿನಲ್ಲಿರುತ್ತಾರೆ. | وَءَايَةٌۭ لَّهُمُ ٱلَّيْلُ نَسْلَخُ مِنْهُ ٱلنَّهَارَ فَإِذَا هُم مُّظْلِمُونَ. ﴿37﴾ |
| 38 ಸೂರ್ಯ ಅದರ ನಿಶ್ಚಿತ ಪಥದಲ್ಲಿ ಚಲಿಸುತ್ತಿದೆ. ಅದು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ನಿರ್ಣಯವಾಗಿದೆ. | وَٱلشَّمْسُ تَجْرِى لِمُسْتَقَرٍّۢ لَّهَا ۚ ذَٰلِكَ تَقْدِيرُ ٱلْعَزِيزِ ٱلْعَلِيمِ. ﴿38﴾ |
| 39 ನಾವು ಚಂದ್ರನಿಗೆ ಕೆಲವು ಹಂತಗಳನ್ನು ನಿರ್ಣಯಿಸಿದ್ದೇವೆ. ಎಲ್ಲಿಯವರೆಗೆಂದರೆ, ಅದು ಹಳೆಯ ಖರ್ಜೂರದ ದಿಂಡಿನ ರೂಪಕ್ಕೆ ಮರಳುತ್ತದೆ. | وَٱلْقَمَرَ قَدَّرْنَٰهُ مَنَازِلَ حَتَّىٰ عَادَ كَٱلْعُرْجُونِ ٱلْقَدِيمِ. ﴿39﴾ |
| 40 ಸೂರ್ಯನಿಗೆ ಚಂದ್ರನನ್ನು ಮುಟ್ಟಲು ಸಾಧ್ಯವಿಲ್ಲ. ರಾತ್ರಿ ಹಗಲನ್ನು ದಾಟಿಹೋಗುವುದಿಲ್ಲ. ಎಲ್ಲವೂ ಅವುಗಳ ನಿಶ್ಚಿತ ಕಕ್ಷೆಗಳಲ್ಲಿ ಈಜುತ್ತಿವೆ. | لَا ٱلشَّمْسُ يَنۢبَغِى لَهَآ أَن تُدْرِكَ ٱلْقَمَرَ وَلَا ٱلَّيْلُ سَابِقُ ٱلنَّهَارِ ۚ وَكُلٌّۭ فِى فَلَكٍۢ يَسْبَحُونَ. ﴿40﴾ |
| 41 ನಾವು ಅವರ ಸಂತಾನವನ್ನು ತುಂಬಿ ತುಳುಕುವ ನಾವೆಯಲ್ಲಿ ಹೊತ್ತು ಸಾಗಿಸಿದ್ದು ಅವರಿಗೊಂದು ದೃಷ್ಟಾಂತವಾಗಿದೆ. | وَءَايَةٌۭ لَّهُمْ أَنَّا حَمَلْنَا ذُرِّيَّتَهُمْ فِى ٱلْفُلْكِ ٱلْمَشْحُونِ. ﴿41﴾ |
| 42 ಅವರು ಸವಾರಿ ಮಾಡಲು ಬಳಸುವ ಇಂತಹ ಅನೇಕ ವಸ್ತುಗಳನ್ನು ನಾವು ಸೃಷ್ಟಿಸಿದ್ದೇವೆ. | وَخَلَقْنَا لَهُم مِّن مِّثْلِهِۦ مَا يَرْكَبُونَ. ﴿42﴾ |
| 43 ನಾವು ಇಚ್ಛಿಸಿದರೆ ಅವರನ್ನು ಮುಳುಗಿಸಿ ಬಿಡುವೆವು. ಆಗ ಅವರ ಕೂಗನ್ನು ಕೇಳುವವರು ಯಾರೂ ಇರಲಾರರು. ಅವರು ಸ್ವತಃ ರಕ್ಷಣೆಯನ್ನೂ ಪಡೆಯಲಾರರು. | وَإِن نَّشَأْ نُغْرِقْهُمْ فَلَا صَرِيخَ لَهُمْ وَلَا هُمْ يُنقَذُونَ. ﴿43﴾ |
| 44 ಆದರೆ ನಾವು ನಮ್ಮ ಕಡೆಯ ದಯೆಯಿಂದ ಅವರನ್ನು ರಕ್ಷಿಸುತ್ತೇವೆ ಮತ್ತು ಒಂದು ನಿಶ್ಚಿತ ಕಾಲದವರೆಗೆ ಅವರಿಗೆ ಸವಲತ್ತುಗಳನ್ನು ನೀಡುತ್ತೇವೆ. | إِلَّا رَحْمَةًۭ مِّنَّا وَمَتَٰعًا إِلَىٰ حِينٍۢ. ﴿44﴾ |
| 45 “ಮುಂದೆ ಉಂಟಾಗಲಿರುವ ಮತ್ತು ಈಗಾಗಲೇ ಉಂಟಾಗಿರುವ ಪಾಪಗಳ ಬಗ್ಗೆ ಎಚ್ಚರವಾಗಿರಿ; ನಿಮಗೆ ದಯೆ ತೋರಲಾಗುವುದಕ್ಕಾಗಿ” ಎಂದು ಅವರೊಡನೆ ಹೇಳಲಾದರೆ (ಅವರು ಅದನ್ನು ನಿರ್ಲಕ್ಷಿಸುತ್ತಾರೆ). | وَإِذَا قِيلَ لَهُمُ ٱتَّقُوا۟ مَا بَيْنَ أَيْدِيكُمْ وَمَا خَلْفَكُمْ لَعَلَّكُمْ تُرْحَمُونَ. ﴿45﴾ |
| 46 ಅವರ ಪರಿಪಾಲಕನ (ಅಲ್ಲಾಹನ) ಕಡೆಯ ದೃಷ್ಟಾಂತಗಳಲ್ಲಿ ಯಾವುದೇ ದೃಷ್ಟಾಂತವು ಅವರ ಬಳಿಗೆ ಬಂದರೂ ಅವರು ಅದನ್ನು ನಿರ್ಲಕ್ಷಿಸಿ ವಿಮುಖರಾಗುತ್ತಿದ್ದರು. | وَمَا تَأْتِيهِم مِّنْ ءَايَةٍۢ مِّنْ ءَايَٰتِ رَبِّهِمْ إِلَّا كَانُوا۟ عَنْهَا مُعْرِضِينَ. ﴿46﴾ |
|
47
“ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ”[1] ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.”[2]
[1] ಅಂದರೆ ಬಡವರು, ನಿರ್ಗತಿಕರು ಮುಂತಾದವರಿಗೆ ದಾನ ಮಾಡಿರಿ.
[2] ಅವರು ಬಡವರಾಗಿರಬೇಕು ಎಂಬುದು ಅಲ್ಲಾಹನ ನಿರ್ಧಾರವಾಗಿದೆ. ಅವನು ಇಚ್ಛಿಸುತ್ತಿದ್ದರೆ ಅವರನ್ನು ಶ್ರೀಮಂತರನ್ನಾಗಿ ಮಾಡುತ್ತಿದ್ದನು. ನಾವು ಅವರಿಗೆ ದಾನ ಮಾಡಬೇಕೆಂದು ಹೇಳುವುದು ಅಲ್ಲಾಹನ ನಿರ್ಧಾರಕ್ಕೆ ವಿರುದ್ಧವಾಗುತ್ತದೆ. ಇದು ಸ್ಪಷ್ಟ ದುರ್ಮಾರ್ಗವಾಗಿದೆ ಎಂದು ಅವರು ಹೇಳುತ್ತಿದ್ದರು.
|
وَإِذَا قِيلَ لَهُمْ أَنفِقُوا۟ مِمَّا رَزَقَكُمُ ٱللَّهُ قَالَ ٱلَّذِينَ كَفَرُوا۟ لِلَّذِينَ ءَامَنُوٓا۟ أَنُطْعِمُ مَن لَّوْ يَشَآءُ ٱللَّهُ أَطْعَمَهُۥٓ إِنْ أَنتُمْ إِلَّا فِى ضَلَٰلٍۢ مُّبِينٍۢ. ﴿47﴾ |
| 48 ಅವರು ಹೇಳುತ್ತಾರೆ: “ನೀವು ಸತ್ಯವಂತರಾಗಿದ್ದರೆ ಈ ವಾಗ್ದಾನವು ಯಾವಾಗ ನಿಜವಾಗುತ್ತದೆಂದು ಹೇಳಿರಿ.” | وَيَقُولُونَ مَتَىٰ هَٰذَا ٱلْوَعْدُ إِن كُنتُمْ صَٰدِقِينَ. ﴿48﴾ |
| 49 ಅವರು ಒಂದು ಮಹಾ ಚೀತ್ಕಾರವನ್ನು ಮಾತ್ರ ಕಾಯುತ್ತಿದ್ದಾರೆ. ಅವರು ಪರಸ್ಪರ ತರ್ಕಿಸುತ್ತಿರುವಾಗಲೇ ಅದು ಅವರನ್ನು ಹಿಡಿಯುವುದು. | مَا يَنظُرُونَ إِلَّا صَيْحَةًۭ وَٰحِدَةًۭ تَأْخُذُهُمْ وَهُمْ يَخِصِّمُونَ. ﴿49﴾ |
| 50 ಆಗ ಯಾವುದೇ ಉಯಿಲು ಮಾಡಲು ಅವರಿಗೆ ಸಾಧ್ಯವಾಗುವುದಿಲ್ಲ. ತಮ್ಮ ಮನೆಯವರ ಬಳಿಗೆ ಮರಳಲೂ ಸಾಧ್ಯವಾಗುವುದಿಲ್ಲ. | فَلَا يَسْتَطِيعُونَ تَوْصِيَةًۭ وَلَآ إِلَىٰٓ أَهْلِهِمْ يَرْجِعُونَ. ﴿50﴾ |
| 51 ಕಹಳೆಯಲ್ಲಿ ಊದಲಾಗುವುದು. ಆಗ ಅಗೋ! ಅವರು ಸಮಾಧಿಗಳಿಂದ ಎದ್ದು ತಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಧಾವಿಸುವರು. | وَنُفِخَ فِى ٱلصُّورِ فَإِذَا هُم مِّنَ ٱلْأَجْدَاثِ إِلَىٰ رَبِّهِمْ يَنسِلُونَ. ﴿51﴾ |
| 52 ಅವರು ಹೇಳುವರು: “ಅಯ್ಯೋ! ನಮ್ಮ ದುರ್ಗತಿಯೇ! ನಮ್ಮನ್ನು ನಿದ್ದೆಯಿಂದ ಎಬ್ಬಿಸಿದ್ದು ಯಾರು?” (ಆಗ ಅವರಿಗೆ ಉತ್ತರ ನೀಡಲಾಗುವುದು): “ಇದು ಪರಮ ದಯಾಳು (ಅಲ್ಲಾಹು) ಮಾಡಿದ ವಾಗ್ದಾನವಾಗಿದೆ ಮತ್ತು ಸಂದೇಶವಾಹಕರುಗಳು ಈ ಸತ್ಯವನ್ನು ನಿಮಗೆ ತಿಳಿಸಿದ್ದರು.” | قَالُوا۟ يَٰوَيْلَنَا مَنۢ بَعَثَنَا مِن مَّرْقَدِنَا ۜ ۗ هَٰذَا مَا وَعَدَ ٱلرَّحْمَٰنُ وَصَدَقَ ٱلْمُرْسَلُونَ. ﴿52﴾ |
| 53 ಅದು ಕೇವಲ ಒಂದು ಚೀತ್ಕಾರ ಮಾತ್ರವಾಗಿರುತ್ತದೆ. ಆಗ ಅಗೋ! ಅವರೆಲ್ಲರನ್ನೂ ನಮ್ಮ ಮುಂದೆ ಹಾಜರುಪಡಿಸಲಾಗುತ್ತದೆ. | إِن كَانَتْ إِلَّا صَيْحَةًۭ وَٰحِدَةًۭ فَإِذَا هُمْ جَمِيعٌۭ لَّدَيْنَا مُحْضَرُونَ. ﴿53﴾ |
| 54 ಆ ದಿನ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. ನೀವು ಮಾಡಿದ ಕರ್ಮಗಳ ಪ್ರತಿಫಲವನ್ನೇ ಹೊರತು ಬೇರೇನೂ ನಿಮಗೆ ನೀಡಲಾಗುವುದಿಲ್ಲ. | فَٱلْيَوْمَ لَا تُظْلَمُ نَفْسٌۭ شَيْـًۭٔا وَلَا تُجْزَوْنَ إِلَّا مَا كُنتُمْ تَعْمَلُونَ. ﴿54﴾ |
| 55 ನಿಶ್ಚಯವಾಗಿಯೂ ಅಂದು ಸ್ವರ್ಗವಾಸಿಗಳು (ಆನಂದದಾಯಕ) ಕೆಲಸ-ಕಾರ್ಯಗಳಲ್ಲಿ ನಿರತರಾಗಿರುವರು. | إِنَّ أَصْحَٰبَ ٱلْجَنَّةِ ٱلْيَوْمَ فِى شُغُلٍۢ فَٰكِهُونَ. ﴿55﴾ |
| 56 ಅವರು ಮತ್ತು ಅವರ ಮಡದಿಯರು ನೆರಳುಗಳಲ್ಲಿ ಮಂಚಗಳ ಮೇಲೆ ಒರಗಿ ಕುಳಿತಿರುವರು. | هُمْ وَأَزْوَٰجُهُمْ فِى ظِلَٰلٍ عَلَى ٱلْأَرَآئِكِ مُتَّكِـُٔونَ. ﴿56﴾ |
| 57 ಅಲ್ಲಿ ಅವರಿಗೆ ಅನೇಕ ತರಹದ ಹಣ್ಣು-ಹಂಪಲುಗಳಿರುವುವು. ಅವರು ಕೇಳುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. | لَهُمْ فِيهَا فَٰكِهَةٌۭ وَلَهُم مَّا يَدَّعُونَ. ﴿57﴾ |
| 58 ಕರುಣಾನಿಧಿಯಾದ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಅವರಿಗೆ ಸಲಾಂ ಹೇಳಲಾಗುವುದು. | سَلَٰمٌۭ قَوْلًۭا مِّن رَّبٍّۢ رَّحِيمٍۢ. ﴿58﴾ |
| 59 “ಅಪರಾಧಿಗಳೇ! ಇಂದು ನೀವು ಬೇರ್ಪಟ್ಟು ನಿಲ್ಲಿರಿ” (ಎಂದು ಘೋಷಿಸಲಾಗುವುದು). | وَٱمْتَٰزُوا۟ ٱلْيَوْمَ أَيُّهَا ٱلْمُجْرِمُونَ. ﴿59﴾ |
| 60 ಓ ಆದಮ್ ಸಂತತಿಗಳೇ! ನೀವು ಶೈತಾನನನ್ನು ಆರಾಧಿಸಬೇಡಿ. ನಿಶ್ಚಯವಾಗಿಯೂ ಅವನು ನಿಮ್ಮ ಸ್ಪಷ್ಟ ವೈರಿಯಾಗಿದ್ದಾನೆ ಎಂದು ನಾನು ನಿಮಗೆ ಆದೇಶಿಸಿರಲಿಲ್ಲವೇ? | ۞ أَلَمْ أَعْهَدْ إِلَيْكُمْ يَٰبَنِىٓ ءَادَمَ أَن لَّا تَعْبُدُوا۟ ٱلشَّيْطَٰنَ ۖ إِنَّهُۥ لَكُمْ عَدُوٌّۭ مُّبِينٌۭ. ﴿60﴾ |
| 61 ನನ್ನನ್ನು ಮಾತ್ರ ಆರಾಧಿಸಿರಿ. ಇದೇ ನೇರ ಮಾರ್ಗ ಎಂದು. | وَأَنِ ٱعْبُدُونِى ۚ هَٰذَا صِرَٰطٌۭ مُّسْتَقِيمٌۭ. ﴿61﴾ |
| 62 ನಿಶ್ಚಯವಾಗಿಯೂ ನಿಮ್ಮಲ್ಲಿ ಸೇರಿದ ಎಷ್ಟೋ ಜನರನ್ನು ಅವನು ದಾರಿತಪ್ಪಿಸಿದ್ದಾನೆ. ಆದರೂ ನೀವು ಅರ್ಥಮಾಡಿಕೊಳ್ಳುವುದಿಲ್ಲವೇ? | وَلَقَدْ أَضَلَّ مِنكُمْ جِبِلًّۭا كَثِيرًا ۖ أَفَلَمْ تَكُونُوا۟ تَعْقِلُونَ. ﴿62﴾ |
| 63 ಇದೇ ನಿಮಗೆ ಎಚ್ಚರಿಕೆ ನೀಡಲಾದ ಆ ನರಕಾಗ್ನಿ! | هَٰذِهِۦ جَهَنَّمُ ٱلَّتِى كُنتُمْ تُوعَدُونَ. ﴿63﴾ |
| 64 ನಿಮ್ಮ ಸತ್ಯನಿಷೇಧದ ಪ್ರತಿಫಲ ಪಡೆಯಲು ನೀವು ಇಂದು ಅದನ್ನು ಪ್ರವೇಶಿಸಿರಿ. | ٱصْلَوْهَا ٱلْيَوْمَ بِمَا كُنتُمْ تَكْفُرُونَ. ﴿64﴾ |
| 65 ಇಂದು ನಾವು ಅವರ ಬಾಯಿಗಳಿಗೆ ಮೊಹರು ಹಾಕುವೆವು, ಅವರ ಕೈಗಳು ನಮ್ಮೊಡನೆ ಮಾತನಾಡುವುವು ಮತ್ತು ಅವರ ಕಾಲುಗಳು ಅವರು ಮಾಡಿದ ದುಷ್ಕರ್ಮಗಳಿಗೆ ಸಾಕ್ಷಿ ಹೇಳುವುವು. | ٱلْيَوْمَ نَخْتِمُ عَلَىٰٓ أَفْوَٰهِهِمْ وَتُكَلِّمُنَآ أَيْدِيهِمْ وَتَشْهَدُ أَرْجُلُهُم بِمَا كَانُوا۟ يَكْسِبُونَ. ﴿65﴾ |
| 66 ನಾವು ಬಯಸಿದರೆ ಅವರ ಕಣ್ಣುಗಳನ್ನು ಕುರುಡಾಗಿಸುವೆವು. ಆದರೂ ಅವರು ಮಾರ್ಗದ ಕಡೆಗೆ ಧಾವಿಸುವರು. ಆದರೆ ಅವರಿಗೆ ನೋಡಲು ಸಾಧ್ಯವಾಗುವುದು ಹೇಗೆ? | وَلَوْ نَشَآءُ لَطَمَسْنَا عَلَىٰٓ أَعْيُنِهِمْ فَٱسْتَبَقُوا۟ ٱلصِّرَٰطَ فَأَنَّىٰ يُبْصِرُونَ. ﴿66﴾ |
| 67 ನಾವು ಬಯಸಿದರೆ ಅವರು ನಿಂತ ಸ್ಥಳದಲ್ಲಿಯೇ ಅವರ ರೂಪವನ್ನು ವಿರೂಪಗೊಳಿಸುವೆವು. ಆಗ ಅವರಿಗೆ ಮುಂದಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಹಿಂದಕ್ಕೆ ಮರಳಲೂ ಸಾಧ್ಯವಾಗುವುದಿಲ್ಲ. | وَلَوْ نَشَآءُ لَمَسَخْنَٰهُمْ عَلَىٰ مَكَانَتِهِمْ فَمَا ٱسْتَطَٰعُوا۟ مُضِيًّۭا وَلَا يَرْجِعُونَ. ﴿67﴾ |
| 68 ನಾವು ಯಾರಿಗೆ ದೀರ್ಘಾಯುಷ್ಯ ನೀಡುತ್ತೇವೆಯೋ ಅವನ ಸೃಷ್ಟಿಯನ್ನು ನಾವು ತಿರುಗುಮುರುಗು ಮಾಡುತ್ತೇವೆ. ಆದರೂ ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? | وَمَن نُّعَمِّرْهُ نُنَكِّسْهُ فِى ٱلْخَلْقِ ۖ أَفَلَا يَعْقِلُونَ. ﴿68﴾ |
| 69 ನಾವು ಅವರಿಗೆ (ಪ್ರವಾದಿಗೆ) ಕಾವ್ಯವನ್ನು ಕಲಿಸಿಕೊಟ್ಟಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶ ಮತ್ತು ಸ್ಪಷ್ಟ ಕುರ್‌ಆನ್ ಆಗಿದೆ. | وَمَا عَلَّمْنَٰهُ ٱلشِّعْرَ وَمَا يَنۢبَغِى لَهُۥٓ ۚ إِنْ هُوَ إِلَّا ذِكْرٌۭ وَقُرْءَانٌۭ مُّبِينٌۭ. ﴿69﴾ |
| 70 ಇದು ಜೀವಂತವಿರುವವರಿಗೆ ಎಚ್ಚರಿಕೆ ನೀಡುವುದಕ್ಕಾಗಿ ಮತ್ತು ಸತ್ಯನಿಷೇಧಿಗಳ ಮೇಲೆ (ಶಿಕ್ಷೆಯ) ವಚನವು ಖಾತ್ರಿಯಾಗುವುದಕ್ಕಾಗಿದೆ. | لِّيُنذِرَ مَن كَانَ حَيًّۭا وَيَحِقَّ ٱلْقَوْلُ عَلَى ٱلْكَٰفِرِينَ. ﴿70﴾ |
| 71 ನಮ್ಮ ಕೈಗಳು ನಿರ್ಮಿಸಿದ ವಸ್ತುಗಳಲ್ಲಿ ಸೇರಿದ ಜಾನುವಾರುಗಳನ್ನು ನಾವು ಅವರಿಗೋಸ್ಕರ ಸೃಷ್ಟಿಸಿದ್ದೇವೆಂದು ಅವರು ನೋಡಿಲ್ಲವೇ? ಅವರು ಅವುಗಳ ಮಾಲಿಕರಾಗಿದ್ದಾರೆ. | أَوَلَمْ يَرَوْا۟ أَنَّا خَلَقْنَا لَهُم مِّمَّا عَمِلَتْ أَيْدِينَآ أَنْعَٰمًۭا فَهُمْ لَهَا مَٰلِكُونَ. ﴿71﴾ |
| 72 ನಾವು ಅವುಗಳನ್ನು ಅವರಿಗೆ ಪಳಗಿಸಿಕೊಟ್ಟಿದ್ದೇವೆ. ಅವುಗಳಲ್ಲಿ ಕೆಲವು ಪ್ರಾಣಿಗಳ ಮೇಲೆ ಅವರ ಸವಾರಿ ಮಾಡುತ್ತಾರೆ ಮತ್ತು ಕೆಲವು ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. | وَذَلَّلْنَٰهَا لَهُمْ فَمِنْهَا رَكُوبُهُمْ وَمِنْهَا يَأْكُلُونَ. ﴿72﴾ |
| 73 ಅವುಗಳಲ್ಲಿ ಅವರಿಗೆ ಅನೇಕ ಪ್ರಯೋಜನಗಳಿವೆ; ಪಾನೀಯವೂ ಇದೆ. ಆದರೂ ಅವರು ಕೃತಜ್ಞರಾಗುವುದಿಲ್ಲವೇ? | وَلَهُمْ فِيهَا مَنَٰفِعُ وَمَشَارِبُ ۖ أَفَلَا يَشْكُرُونَ. ﴿73﴾ |
| 74 ಅವರು ಅಲ್ಲಾಹನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆ ದೇವರುಗಳು ಅವರಿಗೆ ಸಹಾಯ ಮಾಡುವುದಕ್ಕಾಗಿ. | وَٱتَّخَذُوا۟ مِن دُونِ ٱللَّهِ ءَالِهَةًۭ لَّعَلَّهُمْ يُنصَرُونَ. ﴿74﴾ |
| 75 ಆದರೆ ಅವರಿಗೆ ಸಹಾಯ ಮಾಡಲು ಆ ದೇವರುಗಳಿಗೆ ಸಾಧ್ಯವಿಲ್ಲ. (ಆದರೂ) ಅವರು ಆ ದೇವರುಗಳಿಗಿರುವ ಸನ್ನದ್ಧ ಸೈನ್ಯವಾಗಿ ಬಿಟ್ಟಿದ್ದಾರೆ. | لَا يَسْتَطِيعُونَ نَصْرَهُمْ وَهُمْ لَهُمْ جُندٌۭ مُّحْضَرُونَ. ﴿75﴾ |
| 76 ಆದ್ದರಿಂದ ಅವರು ಹೇಳುವ ಮಾತುಗಳು ನಿಮ್ಮನ್ನು ಬೇಸರಗೊಳಿಸದಿರಲಿ. ಅವರು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ನಾವು ಖಂಡಿತ ತಿಳಿಯುತ್ತೇವೆ. | فَلَا يَحْزُنكَ قَوْلُهُمْ ۘ إِنَّا نَعْلَمُ مَا يُسِرُّونَ وَمَا يُعْلِنُونَ. ﴿76﴾ |
| 77 ಮನುಷ್ಯನು ನೋಡಿಲ್ಲವೇ? ನಾವು ಅವನನ್ನು ಒಂದು ವೀರ್ಯದಿಂದ ಸೃಷ್ಟಿಸಿದ್ದೇವೆಂದು? ನಂತರ ಇದ್ದಕ್ಕಿದ್ದಂತೆ ಅವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ. | أَوَلَمْ يَرَ ٱلْإِنسَٰنُ أَنَّا خَلَقْنَٰهُ مِن نُّطْفَةٍۢ فَإِذَا هُوَ خَصِيمٌۭ مُّبِينٌۭ. ﴿77﴾ |
| 78 ಅವನು ನಮಗೆ ಒಂದು ಉದಾಹರಣೆಯನ್ನು ತಿಳಿಸುತ್ತಾನೆ. ಆದರೆ ಸ್ವತಃ ತನ್ನ ಸೃಷ್ಟಿಯನ್ನೇ ಅವನು ಮರೆತು ಬಿಟ್ಟಿದ್ದಾನೆ. ಅವನು ಕೇಳುತ್ತಾನೆ: “ಕೊಳೆತ ಮೂಳೆಗಳಿಗೆ ಜೀವ ನೀಡುವುದು ಯಾರು?” | وَضَرَبَ لَنَا مَثَلًۭا وَنَسِىَ خَلْقَهُۥ ۖ قَالَ مَن يُحْىِ ٱلْعِظَٰمَ وَهِىَ رَمِيمٌۭ. ﴿78﴾ |
| 79 ಹೇಳಿರಿ: “ಅದನ್ನು ಪ್ರಥಮ ಬಾರಿ ಸೃಷ್ಟಿಸಿದವನೇ ಅದಕ್ಕೆ ಜೀವವನ್ನು ನೀಡುತ್ತಾನೆ. ಅವನು ಎಲ್ಲಾ ಸೃಷ್ಟಿಗಳ ಬಗ್ಗೆ ಸ್ಪಷ್ಟ ಜ್ಞಾನವುಳ್ಳವನಾಗಿದ್ದಾನೆ.” | قُلْ يُحْيِيهَا ٱلَّذِىٓ أَنشَأَهَآ أَوَّلَ مَرَّةٍۢ ۖ وَهُوَ بِكُلِّ خَلْقٍ عَلِيمٌ. ﴿79﴾ |
| 80 ಅವನು ಯಾರೆಂದರೆ, ನಿಮಗೆ ಹಸಿರು ಮರದಿಂದ ಬೆಂಕಿಯನ್ನು ನಿರ್ಮಿಸಿ ಕೊಟ್ಟವನು. ಆಗ ಅಗೋ! ನೀವು ಅದರಿಂದ ಬೆಂಕಿ ಉರಿಸುತ್ತೀರಿ. | ٱلَّذِى جَعَلَ لَكُم مِّنَ ٱلشَّجَرِ ٱلْأَخْضَرِ نَارًۭا فَإِذَآ أَنتُم مِّنْهُ تُوقِدُونَ. ﴿80﴾ |
| 81 ಭೂಮ್ಯಾಕಾಶಗಳನ್ನು ಸೃಷ್ಟಿಸಿದವನಿಗೆ ಅವರಂತಿರುವ ಮನುಷ್ಯರನ್ನು ಸೃಷ್ಟಿಸುವ ಸಾಮರ್ಥ್ಯವಿಲ್ಲವೇ? ಹೌದು (ಖಂಡಿತ ಸಾಮರ್ಥ್ಯವಿದೆ)! ಅವನು ಎಲ್ಲವನ್ನು ಸೃಷ್ಟಿಸುವವನು ಮತ್ತು ಸರ್ವಜ್ಞನಾಗಿದ್ದಾನೆ. | أَوَلَيْسَ ٱلَّذِى خَلَقَ ٱلسَّمَٰوَٰتِ وَٱلْأَرْضَ بِقَٰدِرٍ عَلَىٰٓ أَن يَخْلُقَ مِثْلَهُم ۚ بَلَىٰ وَهُوَ ٱلْخَلَّٰقُ ٱلْعَلِيمُ. ﴿81﴾ |
| 82 ಅವನು ಯಾವುದೇ ವಸ್ತುವನ್ನು ಬಯಸಿದರೆ, ಅದಕ್ಕೆ “ಉಂಟಾಗು” ಎಂಬ ಆಜ್ಞೆಯನ್ನು ಮಾತ್ರ ನೀಡುತ್ತಾನೆ. ತಕ್ಷಣ ಅದು ಉಂಟಾಗುತ್ತದೆ! | إِنَّمَآ أَمْرُهُۥٓ إِذَآ أَرَادَ شَيْـًٔا أَن يَقُولَ لَهُۥ كُن فَيَكُونُ. ﴿82﴾ |
| 83 ಎಲ್ಲ ವಸ್ತುಗಳ ಸಾರ್ವಭೌಮತ್ವವು ಯಾರ ಕೈಯ್ಯಲ್ಲಿದೆಯೋ ಅವನು ಪರಮ ಪರಿಶುದ್ಧನು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. | فَسُبْحَٰنَ ٱلَّذِى بِيَدِهِۦ مَلَكُوتُ كُلِّ شَىْءٍۢ وَإِلَيْهِ تُرْجَعُونَ. ﴿83﴾ |