Loading date... | Loading Hijri date... | Loading time...

ق

ಕನ್ನಡ Translation with Arabic Quran Text

ಕನ್ನಡ العربية
1 ಕ್ವಾಫ್. ಈ ಮಹತ್ವಪೂರ್ಣ ಕುರ್‌ಆನಿನ ಮೇಲಾಣೆ. قٓ ۚ وَٱلْقُرْءَانِ ٱلْمَجِيدِ. ﴿1﴾
2 ಅವರಿಂದಲೇ ಅವರಿಗೆ ಒಬ್ಬ ಮುನ್ನೆಚ್ಚರಿಕೆಗಾರ (ಪ್ರವಾದಿ) ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಡುತ್ತಾರೆ. ಸತ್ಯನಿಷೇಧಿಗಳು ಹೇಳುತ್ತಾರೆ: “ಇದೊಂದು ಆಶ್ಚರ್ಯಕರ ಸಂಗತಿಯಾಗಿದೆ. بَلْ عَجِبُوٓا۟ أَن جَآءَهُم مُّنذِرٌۭ مِّنْهُمْ فَقَالَ ٱلْكَٰفِرُونَ هَٰذَا شَىْءٌ عَجِيبٌ. ﴿2﴾
3 ನಾವು ಸತ್ತು ಮಣ್ಣಾಗಿ ಬಿಟ್ಟ ಬಳಿಕ (ಪುನಃ ಜೀವ ಪಡೆಯುವೆವೇ)? ಈ ಮರಳುವಿಕೆ ಬಹಳ ದೂರದ (ಅಸಂಭವ್ಯ) ಸಂಗತಿಯಾಗಿದೆ.” أَءِذَا مِتْنَا وَكُنَّا تُرَابًۭا ۖ ذَٰلِكَ رَجْعٌۢ بَعِيدٌۭ. ﴿3﴾
4 ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ.[1]
[1] ಮನುಷ್ಯನು ಸಮಾಧಿಗೆ ಸೇರಿದ ಬಳಿಕ ಅವನ ಮಾಂಸ ಮತ್ತು ಮೂಳೆಗಳನ್ನು ಭೂಮಿ ತಿನ್ನುತ್ತದೆ. ಅಂದರೆ ಅವನು ಭೂಮಿಯಲ್ಲಿ ಜೀರ್ಣವಾಗಿ ಬಿಡುತ್ತಾನೆ. ಅವನ ಮಾಂಸ, ಮೂಳೆಗಳು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಭೂಮಿ ತಿನ್ನುವುದನ್ನು ಅಲ್ಲಾಹು ತಿಳಿಯುತ್ತಾನೆ. ಅವೆಲ್ಲವೂ ಒಂದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಆದ್ದರಿಂದ ಅವನನ್ನು ಪುನಃ ಸೃಷ್ಟಿಸುವುದು ಅಲ್ಲಾಹನಿಗೆ ಕಷ್ಟವೇ ಅಲ್ಲ.
قَدْ عَلِمْنَا مَا تَنقُصُ ٱلْأَرْضُ مِنْهُمْ ۖ وَعِندَنَا كِتَٰبٌ حَفِيظٌۢ. ﴿4﴾
5 ವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ. بَلْ كَذَّبُوا۟ بِٱلْحَقِّ لَمَّا جَآءَهُمْ فَهُمْ فِىٓ أَمْرٍۢ مَّرِيجٍ. ﴿5﴾
6 ಅವರ ಮೇಲ್ಭಾಗದಲ್ಲಿರುವ ಆಕಾಶವನ್ನು ಅವರು ನೋಡುವುದಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು ಎಂದು? ಅದರಲ್ಲಿ ಯಾವುದೇ ಬಿರುಕುಗಳಿಲ್ಲ. أَفَلَمْ يَنظُرُوٓا۟ إِلَى ٱلسَّمَآءِ فَوْقَهُمْ كَيْفَ بَنَيْنَٰهَا وَزَيَّنَّٰهَا وَمَا لَهَا مِن فُرُوجٍۢ. ﴿6﴾
7 ನಾವು ಭೂಮಿಯನ್ನು ಹರಡಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ಎಲ್ಲಾ ವಿಧಗಳ ಸುಂದರ ವಸ್ತುಗಳನ್ನು ಬೆಳೆಸಿದೆವು. وَٱلْأَرْضَ مَدَدْنَٰهَا وَأَلْقَيْنَا فِيهَا رَوَٰسِىَ وَأَنۢبَتْنَا فِيهَا مِن كُلِّ زَوْجٍۭ بَهِيجٍۢ. ﴿7﴾
8 (ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ. تَبْصِرَةًۭ وَذِكْرَىٰ لِكُلِّ عَبْدٍۢ مُّنِيبٍۢ. ﴿8﴾
9 ನಾವು ಆಕಾಶದಿಂದ ಸಮೃದ್ಧವಾದ ಮಳೆಯನ್ನು ಸುರಿಸಿದೆವು. ಅದರ ಮೂಲಕ ತೋಟಗಳನ್ನು ಮತ್ತು ಕಟಾವು ಮಾಡುವ ಧಾನ್ಯಗಳನ್ನು ಬೆಳೆಸಿದೆವು. وَنَزَّلْنَا مِنَ ٱلسَّمَآءِ مَآءًۭ مُّبَٰرَكًۭا فَأَنۢبَتْنَا بِهِۦ جَنَّٰتٍۢ وَحَبَّ ٱلْحَصِيدِ. ﴿9﴾
10 ಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು) وَٱلنَّخْلَ بَاسِقَٰتٍۢ لَّهَا طَلْعٌۭ نَّضِيدٌۭ. ﴿10﴾
11 ದಾಸರ ಉಪಜೀವನಕ್ಕಾಗಿ. ನಾವು ಅದರಿಂದ (ಆ ನೀರಿನಿಂದ) ನಿರ್ಜೀವವಾಗಿದ್ದ ಪ್ರದೇಶಕ್ಕೆ ಜೀವವನ್ನು ನೀಡಿದೆವು. ಇದೇ ರೀತಿ (ಸಮಾಧಿಗಳಿಂದ ನಿಮ್ಮನ್ನು) ಹೊರತೆಗೆಯಲಾಗುವುದು. رِّزْقًۭا لِّلْعِبَادِ ۖ وَأَحْيَيْنَا بِهِۦ بَلْدَةًۭ مَّيْتًۭا ۚ كَذَٰلِكَ ٱلْخُرُوجُ. ﴿11﴾
12 ಇವರಿಗಿಂತ ಮೊದಲು ನೂಹರ ಜನತೆ, ರಸ್ಸ್‌ನ ಜನರು ಮತ್ತು ಸಮೂದ್ ಗೋತ್ರದವರು ಸತ್ಯವನ್ನು ನಿಷೇಧಿಸಿದರು. كَذَّبَتْ قَبْلَهُمْ قَوْمُ نُوحٍۢ وَأَصْحَٰبُ ٱلرَّسِّ وَثَمُودُ. ﴿12﴾
13 ಆದ್ ಗೋತ್ರದವರು, ಫರೋಹ ಮತ್ತು ಲೂತರ ಸಹೋದರರು (ಜನರು) ಕೂಡ. وَعَادٌۭ وَفِرْعَوْنُ وَإِخْوَٰنُ لُوطٍۢ. ﴿13﴾
14 ಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು. وَأَصْحَٰبُ ٱلْأَيْكَةِ وَقَوْمُ تُبَّعٍۢ ۚ كُلٌّۭ كَذَّبَ ٱلرُّسُلَ فَحَقَّ وَعِيدِ. ﴿14﴾
15 ನಾವು ಪ್ರಥಮ ಬಾರಿ ಸೃಷ್ಟಿಸಿದಾಗಲೇ ಸುಸ್ತಾದೆವೇ? ಅಲ್ಲ, ವಾಸ್ತವವಾಗಿ ಅವರು ಹೊಸ ಸೃಷ್ಟಿಯ ಬಗ್ಗೆ ಸಂಶಯಪಡುತ್ತಾರೆ. أَفَعَيِينَا بِٱلْخَلْقِ ٱلْأَوَّلِ ۚ بَلْ هُمْ فِى لَبْسٍۢ مِّنْ خَلْقٍۢ جَدِيدٍۢ. ﴿15﴾
16 ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಸೃಷ್ಟಿಸಿದೆವು. ಅವನ ಮನಸ್ಸು ಅವನೊಡನೆ ಪಿಸುಗುಡುವ ಸಂಗತಿಗಳನ್ನು ನಾವು ತಿಳಿಯುತ್ತೇವೆ. ನಾವು ಅವನಿಗೆ ಅವನ ಕಂಠನಾಡಿಗಿಂತಲೂ ಹತ್ತಿರದಲ್ಲಿದ್ದೇವೆ. وَلَقَدْ خَلَقْنَا ٱلْإِنسَٰنَ وَنَعْلَمُ مَا تُوَسْوِسُ بِهِۦ نَفْسُهُۥ ۖ وَنَحْنُ أَقْرَبُ إِلَيْهِ مِنْ حَبْلِ ٱلْوَرِيدِ. ﴿16﴾
17 ಇಬ್ಬರು ಪಡೆಯುವವರು (ಕರ್ಮಗಳನ್ನು ದಾಖಲಿಸುವ ದೇವದೂತರು) ಪಡೆಯುವ ಸಂದರ್ಭ. ಒಬ್ಬರು ಬಲಭಾಗದಲ್ಲಿ ಮತ್ತು ಇನ್ನೊಬ್ಬರು ಎಡಭಾಗದಲ್ಲಿ ಕುಳಿತಿರುವರು. إِذْ يَتَلَقَّى ٱلْمُتَلَقِّيَانِ عَنِ ٱلْيَمِينِ وَعَنِ ٱلشِّمَالِ قَعِيدٌۭ. ﴿17﴾
18 ಮನುಷ್ಯನು ಯಾವುದೇ ಮಾತನ್ನೂ ಹೇಳಲಾರನು—ಅವನ ಬಳಿ ಒಬ್ಬ ವೀಕ್ಷಕನು (ಅದನ್ನು ದಾಖಲಿಸಲು) ಸಿದ್ಧವಾಗಿರದ ಹೊರತು. مَّا يَلْفِظُ مِن قَوْلٍ إِلَّا لَدَيْهِ رَقِيبٌ عَتِيدٌۭ. ﴿18﴾
19 ಮರಣದ ಕಡು ಯಾತನೆಯು ಸತ್ಯದೊಂದಿಗೆ ಬರುವುದು. ಯಾವುದರಿಂದ ನೀನು ದೂರವಾಗಲು ಪ್ರಯತ್ನಿಸುತ್ತಿದ್ದೆಯೋ ಅದೇ ಇದು. وَجَآءَتْ سَكْرَةُ ٱلْمَوْتِ بِٱلْحَقِّ ۖ ذَٰلِكَ مَا كُنتَ مِنْهُ تَحِيدُ. ﴿19﴾
20 ಕಹಳೆಯಲ್ಲಿ ಊದಲಾಗುವುದು. ಅದು ಎಚ್ಚರಿಕೆಯ ದಿನವಾಗಿದೆ. وَنُفِخَ فِى ٱلصُّورِ ۚ ذَٰلِكَ يَوْمُ ٱلْوَعِيدِ. ﴿20﴾
21 ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು.[1]
[1] ಪ್ರತಿಯೊಬ್ಬ ಮನುಷ್ಯನ ಜೊತೆಗೆ ಅವನನ್ನು ವಿಚಾರಣಾ ಸ್ಥಳಕ್ಕೆ ಸಾಗಿಸುವ ಒಬ್ಬ ದೇವದೂತ ಮತ್ತು ಅವನ ಕರ್ಮಗಳಿಗೆ ಸಾಕ್ಷಿ ನುಡಿಯುವ ಒಬ್ಬ ದೇವದೂತ ಇರಲಿದ್ದಾರೆ.
وَجَآءَتْ كُلُّ نَفْسٍۢ مَّعَهَا سَآئِقٌۭ وَشَهِيدٌۭ. ﴿21﴾
22 “ನಿಶ್ಚಯವಾಗಿಯೂ ನೀನು ಇದನ್ನು ನಿರ್ಲಕ್ಷಿಸಿದ್ದೆ. ಆದರೆ ನಾವು ನಿನ್ನ ಮುಂಭಾಗದಿಂದ ಪರದೆಯನ್ನು ನಿವಾರಿಸಿದ್ದೇವೆ. ಆದ್ದರಿಂದ ಇಂದು ನಿನ್ನ ದೃಷ್ಟಿಯು ಬಹಳ ಹರಿತವಾಗಿದೆ.” لَّقَدْ كُنتَ فِى غَفْلَةٍۢ مِّنْ هَٰذَا فَكَشَفْنَا عَنكَ غِطَآءَكَ فَبَصَرُكَ ٱلْيَوْمَ حَدِيدٌۭ. ﴿22﴾
23 ಅವನ ಜೊತೆಗಾರನು (ದೇವದೂತ) ಹೇಳುವನು: “ನನ್ನ ಬಳಿಯಿರುವ ಇದು (ದಾಖಲೆ) ಸಿದ್ಧವಾಗಿದೆ.” وَقَالَ قَرِينُهُۥ هَٰذَا مَا لَدَىَّ عَتِيدٌ. ﴿23﴾
24 (ಅಲ್ಲಾಹು ಆಜ್ಞಾಪಿಸುವನು): “ಅವನನ್ನು ನರಕಕ್ಕೆ ಎಸೆದು ಬಿಡಿ—ಪ್ರತಿಯೊಬ್ಬ ಸತ್ಯನಿಷೇಧಿ ದುಷ್ಕರ್ಮಿಯನ್ನು. أَلْقِيَا فِى جَهَنَّمَ كُلَّ كَفَّارٍ عَنِيدٍۢ. ﴿24﴾
25 ಒಳಿತನ್ನು ತಡೆಯುವ ಅತಿರೇಕಿ ಸಂಶಯಪಿಶಾಚಿಯನ್ನು. مَّنَّاعٍۢ لِّلْخَيْرِ مُعْتَدٍۢ مُّرِيبٍ. ﴿25﴾
26 ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ನಿಶ್ಚಯಿಸಿದವನನ್ನು. ಅವನನ್ನು ಕಠೋರ ಶಿಕ್ಷೆಗೆ ಎಸೆದುಬಿಡಿ.” ٱلَّذِى جَعَلَ مَعَ ٱللَّهِ إِلَٰهًا ءَاخَرَ فَأَلْقِيَاهُ فِى ٱلْعَذَابِ ٱلشَّدِيدِ. ﴿26﴾
27 ಅವನ ಜೊತೆಗಾರನು[1] ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.”
[1] ಜೊತೆಗಾರನು (ಕರೀನ್) ಎಂದರೆ ಪ್ರತಿಯೊಬ್ಬ ಮನುಷ್ಯನ ಜೊತೆಯಲ್ಲಿರುವ ಶೈತಾನ್.
۞ قَالَ قَرِينُهُۥ رَبَّنَا مَآ أَطْغَيْتُهُۥ وَلَٰكِن كَانَ فِى ضَلَٰلٍۭ بَعِيدٍۢ. ﴿27﴾
28 ಅಲ್ಲಾಹು ಹೇಳುವನು: “ನನ್ನ ಮುಂದೆ ತರ್ಕ ಮಾಡಿಬೇಡಿ. ನಾನು ಈಗಾಗಲೇ ನಿಮ್ಮ ಬಳಿಗೆ ಎಚ್ಚರಿಕೆಯನ್ನು ಕಳುಹಿಸಿದ್ದೇನೆ. قَالَ لَا تَخْتَصِمُوا۟ لَدَىَّ وَقَدْ قَدَّمْتُ إِلَيْكُم بِٱلْوَعِيدِ. ﴿28﴾
29 ನನ್ನ ಬಳಿ ಮಾತು ಬದಲಾಗುವುದಿಲ್ಲ. ನಾನು ದಾಸರಿಗೆ ಸ್ವಲ್ಪವೂ ಅನ್ಯಾಯ ಮಾಡುವವನಲ್ಲ.” مَا يُبَدَّلُ ٱلْقَوْلُ لَدَىَّ وَمَآ أَنَا۠ بِظَلَّٰمٍۢ لِّلْعَبِيدِ. ﴿29﴾
30 ನಾವು ನರಕದೊಂದಿಗೆ, “ನೀನು ತುಂಬಿದೆಯಾ?” ಎಂದು ಕೇಳುವ ಸಂದರ್ಭ. ಆಗ ಅದು ಕೇಳುವುದು: “ಹೆಚ್ಚು ಏನಾದರೂ ಇದೆಯೇ?” يَوْمَ نَقُولُ لِجَهَنَّمَ هَلِ ٱمْتَلَأْتِ وَتَقُولُ هَلْ مِن مَّزِيدٍۢ. ﴿30﴾
31 ಸ್ವರ್ಗವನ್ನು ದೇವಭಯವುಳ್ಳವರ ಹತ್ತಿರಕ್ಕೆ ತರಲಾಗುವುದು. ಅದು ಅವರಿಗೆ ಸ್ವಲ್ಪವೂ ದೂರವಿರಲಾರದು. وَأُزْلِفَتِ ٱلْجَنَّةُ لِلْمُتَّقِينَ غَيْرَ بَعِيدٍ. ﴿31﴾
32 “ಇದು ನಿಮಗೆ—ನಿಮ್ಮ ಪೈಕಿ (ಅಲ್ಲಾಹನ ಕಡೆಗೆ ಪಶ್ಚಾತ್ತಪಪಟ್ಟು) ಮರಳುವ ಮತ್ತು (ಅಲ್ಲಾಹು ಕಡ್ಡಾಯಗೊಳಿಸಿದ್ದನ್ನು) ಪಾಲಿಸುವ ಪ್ರತಿಯೊಬ್ಬ ವ್ಯಕ್ತಿಗೆ—ವಾಗ್ದಾನ ಮಾಡಲಾದ ಸಂಗತಿಯಾಗಿದೆ. هَٰذَا مَا تُوعَدُونَ لِكُلِّ أَوَّابٍ حَفِيظٍۢ. ﴿32﴾
33 ಅದೃಶ್ಯ ಸ್ಥಿತಿಯಲ್ಲಿ ಪರಮ ದಯಾಮಯನನ್ನು (ಅಲ್ಲಾಹನನ್ನು) ಭಯಪಟ್ಟು (ಅಲ್ಲಾಹನ ಕಡೆಗೆ) ತಿರುಗಿದ ಹೃದಯದೊಂದಿಗೆ ಬಂದವನಿಗೆ. مَّنْ خَشِىَ ٱلرَّحْمَٰنَ بِٱلْغَيْبِ وَجَآءَ بِقَلْبٍۢ مُّنِيبٍ. ﴿33﴾
34 ನೀವು ಸುರಕ್ಷಿತವಾಗಿ ಅದನ್ನು (ಸ್ವರ್ಗವನ್ನು) ಪ್ರವೇಶಿಸಿರಿ. ಇದು ಶಾಶ್ವತ ವಾಸದ ದಿನವಾಗಿದೆ.” ٱدْخُلُوهَا بِسَلَٰمٍۢ ۖ ذَٰلِكَ يَوْمُ ٱلْخُلُودِ. ﴿34﴾
35 ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ನಮ್ಮ ಬಳಿ ಇನ್ನೂ ಹೆಚ್ಚಿಗೆಯಿದೆ. لَهُم مَّا يَشَآءُونَ فِيهَا وَلَدَيْنَا مَزِيدٌۭ. ﴿35﴾
36 ಇವರಿಗಿಂತ ಮೊದಲು ನಾವು ಅನೇಕ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಊರಿಡೀ ಜಾಲಾಡಿ ನೋಡಿದರು—ಓಡಿ ಪಾರಾಗಲು ಯಾವುದಾದರೂ ಸ್ಥಳವಿದೆಯೇ ಎಂದು! وَكَمْ أَهْلَكْنَا قَبْلَهُم مِّن قَرْنٍ هُمْ أَشَدُّ مِنْهُم بَطْشًۭا فَنَقَّبُوا۟ فِى ٱلْبِلَٰدِ هَلْ مِن مَّحِيصٍ. ﴿36﴾
37 ನಿಶ್ಚಯವಾಗಿಯೂ ಅದರಲ್ಲಿ ನೀತಿಪಾಠವಿದೆ—ಹೃದಯವುಳ್ಳ ವ್ಯಕ್ತಿಗೆ ಅಥವಾ ಹೃದಯ ಸಾನಿಧ್ಯತೆಯಿಂದ ಕಿವಿಗೊಟ್ಟು ಕೇಳುವವನಿಗೆ. إِنَّ فِى ذَٰلِكَ لَذِكْرَىٰ لِمَن كَانَ لَهُۥ قَلْبٌ أَوْ أَلْقَى ٱلسَّمْعَ وَهُوَ شَهِيدٌۭ. ﴿37﴾
38 ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದೆವು. ಆಯಾಸವು ನಮ್ಮನ್ನು ಸ್ಪರ್ಶಿಸಲೇ ಇಲ್ಲ. وَلَقَدْ خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَا فِى سِتَّةِ أَيَّامٍۢ وَمَا مَسَّنَا مِن لُّغُوبٍۢ. ﴿38﴾
39 ಆದ್ದರಿಂದ ಅವರು ಹೇಳುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ. فَٱصْبِرْ عَلَىٰ مَا يَقُولُونَ وَسَبِّحْ بِحَمْدِ رَبِّكَ قَبْلَ طُلُوعِ ٱلشَّمْسِ وَقَبْلَ ٱلْغُرُوبِ. ﴿39﴾
40 ರಾತ್ರಿಯ ಸಮಯದಲ್ಲೂ ಮತ್ತು ನಮಾಝ್ ನಿರ್ವಹಿಸಿದ ಬಳಿಕವೂ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. وَمِنَ ٱلَّيْلِ فَسَبِّحْهُ وَأَدْبَٰرَ ٱلسُّجُودِ. ﴿40﴾
41 ಕಿವಿಗೊಟ್ಟು ಕೇಳಿರಿ. ಕರೆಯುವವನು ಹತ್ತಿರದಲ್ಲೇ ಇರುವ ಒಂದು ಸ್ಥಳದಿಂದ ಕೂಗಿ ಕರೆಯುವ ದಿನ. وَٱسْتَمِعْ يَوْمَ يُنَادِ ٱلْمُنَادِ مِن مَّكَانٍۢ قَرِيبٍۢ. ﴿41﴾
42 ಆ ಭಯಾನಕ ಚೀತ್ಕಾರವನ್ನು ಖಾತ್ರಿಯಾಗಿ ಕೇಳುವ ದಿನ! ಅದು ಹೊರಡುವ ದಿನವಾಗಿದೆ. يَوْمَ يَسْمَعُونَ ٱلصَّيْحَةَ بِٱلْحَقِّ ۚ ذَٰلِكَ يَوْمُ ٱلْخُرُوجِ. ﴿42﴾
43 ನಿಶ್ಚಯವಾಗಿಯೂ ನಾವು ಜೀವ ಮತ್ತು ಮರಣವನ್ನು ನೀಡುವೆವು. ಗಮ್ಯಸ್ಥಾನವು ನಮ್ಮ ಬಳಿಯೇ ಆಗಿದೆ. إِنَّا نَحْنُ نُحْىِۦ وَنُمِيتُ وَإِلَيْنَا ٱلْمَصِيرُ. ﴿43﴾
44 ಭೂಮಿಯು ಒಡೆದು ಸೀಳಾಗಿ ಅವರು ತರಾತುರಿಯಿಂದ (ಹೊರಬರುವ) ದಿನ. ಅವರನ್ನು ಒಟ್ಟುಗೂಡಿಸುವುದು ನಮ್ಮ ಮಟ್ಟಿಗೆ ಬಹಳ ಸುಲಭವಾಗಿದೆ. يَوْمَ تَشَقَّقُ ٱلْأَرْضُ عَنْهُمْ سِرَاعًۭا ۚ ذَٰلِكَ حَشْرٌ عَلَيْنَا يَسِيرٌۭ. ﴿44﴾
45 ಅವರು ಏನು ಹೇಳುತ್ತಿದ್ದಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ನೀವು ಅವರ ಮೇಲೆ ಸರ್ವಾಧಿಕಾರವಿರುವವರಲ್ಲ. ನನ್ನ ಎಚ್ಚರಿಕೆಯನ್ನು ಭಯಪಡುವವರಿಗೆ ಕುರ್‌ಆನ್‍ನ ಮೂಲಕ ಉಪದೇಶವನ್ನು ನೀಡಿರಿ. نَّحْنُ أَعْلَمُ بِمَا يَقُولُونَ ۖ وَمَآ أَنتَ عَلَيْهِم بِجَبَّارٍۢ ۖ فَذَكِّرْ بِٱلْقُرْءَانِ مَن يَخَافُ وَعِيدِ. ﴿45﴾