Loading date... | Loading Hijri date... | Loading time...

المطففين

ಕನ್ನಡ Translation with Arabic Quran Text

ಕನ್ನಡ العربية
1 ಅಳತೆ ಮತ್ತು ತೂಕದಲ್ಲಿ ಕಡಿಮೆ ಮಾಡುವವರಿಗೆ ಮಹಾ ನಾಶವಿದೆ. وَيْلٌۭ لِّلْمُطَفِّفِينَ. ﴿1﴾
2 ಅವರು ಯಾರೆಂದರೆ ಜನರಿಂದ ಅಳತೆ ಮಾಡಿ ಪಡೆಯುವಾಗ ಪೂರ್ಣವಾಗಿ ಪಡೆಯುವವರು. ٱلَّذِينَ إِذَا ٱكْتَالُوا۟ عَلَى ٱلنَّاسِ يَسْتَوْفُونَ. ﴿2﴾
3 ಆದರೆ ಜನರಿಗೆ ಅಳತೆ ಮಾಡಿ ಕೊಡುವಾಗ ಅಥವಾ ತೂಕ ಮಾಡಿ ಕೊಡುವಾಗ ಕಡಿಮೆ ಮಾಡುವವರು. وَإِذَا كَالُوهُمْ أَو وَّزَنُوهُمْ يُخْسِرُونَ. ﴿3﴾
4 ಮರಣಾನಂತರ ಅವರಿಗೆ ಪುನಃ ಜೀವ ನೀಡಿ ಎಬ್ಬಿಸಲಾಗುವುದೆಂಬ ಪ್ರಜ್ಞೆ ಅವರಿಗಿಲ್ಲವೇ? أَلَا يَظُنُّ أُو۟لَٰٓئِكَ أَنَّهُم مَّبْعُوثُونَ. ﴿4﴾
5 ಆ ಮಹಾ ದಿನಕ್ಕಾಗಿ. لِيَوْمٍ عَظِيمٍۢ. ﴿5﴾
6 ಜನರೆಲ್ಲರೂ ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಮುಂದೆ ಎದ್ದು ನಿಲ್ಲುವ ದಿನ. يَوْمَ يَقُومُ ٱلنَّاسُ لِرَبِّ ٱلْعَٰلَمِينَ. ﴿6﴾
7 ನಿಶ್ಚಯವಾಗಿಯೂ ದುಷ್ಕರ್ಮಿಗಳ ಕರ್ಮದಾಖಲೆಯು ಸಿಜ್ಜೀನ್‍ನಲ್ಲಿದೆ. كَلَّآ إِنَّ كِتَٰبَ ٱلْفُجَّارِ لَفِى سِجِّينٍۢ. ﴿7﴾
8 ಸಿಜ್ಜೀನ್ ಏನೆಂದು ನಿಮಗೇನು ಗೊತ್ತು? وَمَآ أَدْرَىٰكَ مَا سِجِّينٌۭ. ﴿8﴾
9 ಅದು ನಮೂದಿಸಲಾದ ಪುಸ್ತಕವಾಗಿದೆ. كِتَٰبٌۭ مَّرْقُومٌۭ. ﴿9﴾
10 ಅಂದು ನಿಷೇಧಿಸಿದವರಿಗೆ ಮಹಾ ನಾಶವಿದೆ. وَيْلٌۭ يَوْمَئِذٍۢ لِّلْمُكَذِّبِينَ. ﴿10﴾
11 ಅವರು ಯಾರೆಂದರೆ ಪ್ರತಿಫಲ ದಿನವನ್ನು ನಿಷೇಧಿಸುವವರು. ٱلَّذِينَ يُكَذِّبُونَ بِيَوْمِ ٱلدِّينِ. ﴿11﴾
12 ಎಲ್ಲೆ ಮೀರಿ ನಡೆಯುವವರು ಮತ್ತು ಮಹಾಪಾಪಿಗಳ ಹೊರತು ಇನ್ನಾರೂ ಅದನ್ನು ನಿಷೇಧಿಸುವುದಿಲ್ಲ. وَمَا يُكَذِّبُ بِهِۦٓ إِلَّا كُلُّ مُعْتَدٍ أَثِيمٍ. ﴿12﴾
13 ಅವನಿಗೆ ನಮ್ಮ ವಚನಗಳನ್ನು ಓದಿಕೊಡಲಾದರೆ ಅದನ್ನು “ಪ್ರಾಚೀನ ಕಾಲದ ಜನರ ಪುರಾಣಗಳು” ಎನ್ನುತ್ತಾನೆ. إِذَا تُتْلَىٰ عَلَيْهِ ءَايَٰتُنَا قَالَ أَسَٰطِيرُ ٱلْأَوَّلِينَ. ﴿13﴾
14 ಅಲ್ಲ, ಅವರು ಮಾಡುತ್ತಿದ್ದ ದುಷ್ಕರ್ಮಗಳ ಕಾರಣ ಕಪ್ಪುಕಲೆಗಳು ಅವರ ಹೃದಯಗಳನ್ನು ಆವರಿಸಿಕೊಂಡಿವೆ. كَلَّا ۖ بَلْ ۜ رَانَ عَلَىٰ قُلُوبِهِم مَّا كَانُوا۟ يَكْسِبُونَ. ﴿14﴾
15 ಅಲ್ಲ, ಅಂದು ಅವರು ಅವರ ಪರಿಪಾಲಕನನ್ನು (ಅಲ್ಲಾಹನನ್ನು) ದರ್ಶಿಸದಂತೆ ಪರದೆಯಲ್ಲಿ ಹಾಕಲಾಗುವರು.[1]
[1] ಸತ್ಯವಿಶ್ವಾಸಿಗಳು ಪರಲೋಕದಲ್ಲಿ ಅಲ್ಲಾಹನ ದರ್ಶನ ಪಡೆಯುವರು. ಆದರೆ ಸತ್ಯನಿಷೇಧಿಗಳಿಗೆ ಆ ಭಾಗ್ಯವಿರುವುದಿಲ್ಲ.
كَلَّآ إِنَّهُمْ عَن رَّبِّهِمْ يَوْمَئِذٍۢ لَّمَحْجُوبُونَ. ﴿15﴾
16 ನಂತರ ನಿಶ್ಚಯವಾಗಿಯೂ ಅವರನ್ನು ಧಗಧಗಿಸುವ ನರಕಕ್ಕೆ ಎಸೆಯಲಾಗುವುದು. ثُمَّ إِنَّهُمْ لَصَالُوا۟ ٱلْجَحِيمِ. ﴿16﴾
17 ನಂತರ ಅವರೊಡನೆ ಹೇಳಲಾಗುವುದು: “ಇದೇ ನೀವು ನಿಷೇಧಿಸುತ್ತಿದ್ದ ನರಕ.” ثُمَّ يُقَالُ هَٰذَا ٱلَّذِى كُنتُم بِهِۦ تُكَذِّبُونَ. ﴿17﴾
18 ಇಲ್ಲವೇ ಇಲ್ಲ. ನಿಶ್ಚಯವಾಗಿಯೂ ಸಜ್ಜನರ ಕರ್ಮದಾಖಲೆಯು ಇಲ್ಲಿಯ್ಯೂನ್‍ನಲ್ಲಿದೆ. كَلَّآ إِنَّ كِتَٰبَ ٱلْأَبْرَارِ لَفِى عِلِّيِّينَ. ﴿18﴾
19 ಇಲ್ಲಿಯ್ಯೂನ್ ಏನೆಂದು ನಿಮಗೇನು ಗೊತ್ತು? وَمَآ أَدْرَىٰكَ مَا عِلِّيُّونَ. ﴿19﴾
20 ಅದು ನಮೂದಿಸಲಾದ ಪುಸ್ತಕವಾಗಿದೆ. كِتَٰبٌۭ مَّرْقُومٌۭ. ﴿20﴾
21 ಸಾಮೀಪ್ಯ ಪಡೆದವರು (ದೇವದೂತರು) ಅದರ ಬಳಿ ಉಪಸ್ಥಿತರಾಗುವರು. يَشْهَدُهُ ٱلْمُقَرَّبُونَ. ﴿21﴾
22 ನಿಶ್ಚಯವಾಗಿಯೂ ಸಜ್ಜನರು ಸುಖಾಡಂಬರಗಳಲ್ಲಿರುವರು. إِنَّ ٱلْأَبْرَارَ لَفِى نَعِيمٍ. ﴿22﴾
23 ಸುಖಾಸನಗಳಲ್ಲಿ ಕುಳಿತು ನೋಡುತ್ತಿರುವರು. عَلَى ٱلْأَرَآئِكِ يَنظُرُونَ. ﴿23﴾
24 ನೀವು ಅವರ ಮುಖಗಳಲ್ಲಿ ಆ ಸುಖಗಳ ಹೊಳಪನ್ನು ಗುರುತಿಸುವಿರಿ. تَعْرِفُ فِى وُجُوهِهِمْ نَضْرَةَ ٱلنَّعِيمِ. ﴿24﴾
25 ಅವರಿಗೆ ಮೊಹರು ಹಾಕಲಾದ ಶುದ್ಧ ಮದ್ಯವನ್ನು ಕುಡಿಯಲು ನೀಡಲಾಗುವುದು. يُسْقَوْنَ مِن رَّحِيقٍۢ مَّخْتُومٍ. ﴿25﴾
26 ಅದರ ಮೊಹರು ಕಸ್ತೂರಿಯಾಗಿದೆ. ಪೈಪೋಟಿ ನಡೆಸುವವರು ಇದಕ್ಕಾಗಿ ಪೈಪೋಟಿ ನಡೆಸಲಿ. خِتَٰمُهُۥ مِسْكٌۭ ۚ وَفِى ذَٰلِكَ فَلْيَتَنَافَسِ ٱلْمُتَنَٰفِسُونَ. ﴿26﴾
27 ಅದರ ಮಿಶ್ರಣವು ತಸ್ನೀಮ್[1] ಆಗಿದೆ.
[1] ಇದು ಸ್ವರ್ಗದ ಎತ್ತರದ ಸ್ಥಳದಿಂದ ಹರಿದು ಬರುವ ತೊರೆ. ಇದು ಸ್ವರ್ಗ ಅತ್ಯುತ್ಕೃಷ್ಟ ನೀರಾಗಿದೆ.
وَمِزَاجُهُۥ مِن تَسْنِيمٍ. ﴿27﴾
28 ಅಂದರೆ ಸಾಮೀಪ್ಯ ಪಡೆದವರು ಕುಡಿಯುವ ಚಿಲುಮೆಯ ನೀರು. عَيْنًۭا يَشْرَبُ بِهَا ٱلْمُقَرَّبُونَ. ﴿28﴾
29 ನಿಶ್ಚಯವಾಗಿಯೂ (ಇಹಲೋಕದಲ್ಲಿ) ಅಪರಾಧಿಗಳು ಸತ್ಯವಿಶ್ವಾಸಿಗಳನ್ನು ತಮಾಷೆ ಮಾಡಿ ನಗುತ್ತಿದ್ದರು. إِنَّ ٱلَّذِينَ أَجْرَمُوا۟ كَانُوا۟ مِنَ ٱلَّذِينَ ءَامَنُوا۟ يَضْحَكُونَ. ﴿29﴾
30 ಅವರು ಸತ್ಯವಿಶ್ವಾಸಿಗಳ ಬಳಿಯಿಂದ ಹೋಗುವಾಗ ಒಬ್ಬರು ಇನ್ನೊಬ್ಬರಿಗೆ ಕಣ್ಣಿನಿಂದ ಸನ್ನೆ ಮಾಡುತ್ತಿದ್ದರು. وَإِذَا مَرُّوا۟ بِهِمْ يَتَغَامَزُونَ. ﴿30﴾
31 ಅವರ ತಮ್ಮ ಮನೆಯವರ ಬಳಿಗೆ ಮರಳುವಾಗ ಮೋಜು ಮಾಡುತ್ತಾ ಮರಳುತ್ತಿದ್ದರು. وَإِذَا ٱنقَلَبُوٓا۟ إِلَىٰٓ أَهْلِهِمُ ٱنقَلَبُوا۟ فَكِهِينَ. ﴿31﴾
32 ಸತ್ಯವಿಶ್ವಾಸಿಗಳನ್ನು ಕಂಡರೆ, “ನಿಶ್ಚಯವಾಗಿಯೂ ಇವರೆಲ್ಲರೂ ದಾರಿತಪ್ಪಿದವರು” ಎನ್ನುತ್ತಿದ್ದರು. وَإِذَا رَأَوْهُمْ قَالُوٓا۟ إِنَّ هَٰٓؤُلَآءِ لَضَآلُّونَ. ﴿32﴾
33 ಇವರನ್ನು ಅವರ (ಸತ್ಯವಿಶ್ವಾಸಿಗಳ) ಕಾವಲುಗಾರರಾಗಿ ಮಾಡಿ ಕಳುಹಿಸಲಾಗಿಲ್ಲ. وَمَآ أُرْسِلُوا۟ عَلَيْهِمْ حَٰفِظِينَ. ﴿33﴾
34 ಆದರೆ ಇಂದು ಸತ್ಯವಿಶ್ವಾಸಿಗಳು ಸತ್ಯನಿಷೇಧಿಗಳನ್ನು ನೋಡಿ ನಗುವರು. فَٱلْيَوْمَ ٱلَّذِينَ ءَامَنُوا۟ مِنَ ٱلْكُفَّارِ يَضْحَكُونَ. ﴿34﴾
35 ಅವರು ಸುಖಾಸನಗಳಲ್ಲಿ ಕುಳಿತು ನೋಡುತ್ತಿರುವರು. عَلَى ٱلْأَرَآئِكِ يَنظُرُونَ. ﴿35﴾
36 ಆ ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗಿದೆಯೋ ಎಂದು. هَلْ ثُوِّبَ ٱلْكُفَّارُ مَا كَانُوا۟ يَفْعَلُونَ. ﴿36﴾