Loading date... | Loading Hijri date... | Loading time...

الفجر

ಕನ್ನಡ Translation with Arabic Quran Text

ಕನ್ನಡ العربية
1 ಪ್ರಭಾತದ ಮೇಲಾಣೆ! وَٱلْفَجْرِ. ﴿1﴾
2 ಹತ್ತು ರಾತ್ರಿಗಳ ಮೇಲಾಣೆ![1]
[1] ದುಲ್-ಹಿಜ್ಜ ತಿಂಗಳ ಮೊದಲ ಹತ್ತು ದಿನ-ರಾತ್ರಿಗಳು.
وَلَيَالٍ عَشْرٍۢ. ﴿2﴾
3 ಸಮ ಮತ್ತು ಬೆಸಗಳ ಮೇಲಾಣೆ! وَٱلشَّفْعِ وَٱلْوَتْرِ. ﴿3﴾
4 ರಾತ್ರಿಯ ಮೇಲಾಣೆ! ಅದು ಚಲಿಸತೊಡಗುವಾಗ. وَٱلَّيْلِ إِذَا يَسْرِ. ﴿4﴾
5 ಇವುಗಳಲ್ಲಿ ಬುದ್ಧಿಯಿರುವವನ ಮಟ್ಟಿಗೆ ಪರ್ಯಾಪ್ತ ಆಣೆಯಿದೆಯೇ? هَلْ فِى ذَٰلِكَ قَسَمٌۭ لِّذِى حِجْرٍ. ﴿5﴾
6 ನಿಮ್ಮ ಪರಿಪಾಲಕನು (ಅಲ್ಲಾಹು) ಆದ್ ಗೋತ್ರದವರೊಂದಿಗೆ ಏನು ಮಾಡಿದನೆಂದು ನೀವು ನೋಡಿಲ್ಲವೇ? أَلَمْ تَرَ كَيْفَ فَعَلَ رَبُّكَ بِعَادٍ. ﴿6﴾
7 ಸ್ತಂಭಗಳ ಜನರಾದ ಇರಮ್ ಗೋತ್ರದವರೊಂದಿಗೆ.[1]
[1] ಇರಮ್ ಎಂದರೆ ಆದ್ ಗೋತ್ರದವರ ಪೂರ್ವ ಪಿತಾಮಹನ ಹೆಸರು. ಈತನ ಸಂತಾನ ಪರಂಪರೆಯೇ ಆದ್ ಗೋತ್ರ. ಸ್ತಂಭಗಳ ಜನರು ಎಂಬ ನುಡಿಗಟ್ಟು ಅವರ ಶಕ್ತಿ ಮತ್ತು ದೇಹದಾರ್ಢ್ಯವನ್ನು ಸೂಚಿಸುತ್ತದೆ.
إِرَمَ ذَاتِ ٱلْعِمَادِ. ﴿7﴾
8 ಅವರಂತಿರುವ ಜನರನ್ನು ಯಾವುದೇ ಊರಲ್ಲೂ ಸೃಷ್ಟಿಸಲಾಗಿಲ್ಲ. ٱلَّتِى لَمْ يُخْلَقْ مِثْلُهَا فِى ٱلْبِلَٰدِ. ﴿8﴾
9 ಕಣಿವೆಯಲ್ಲಿ ಬಂಡೆಗಳನ್ನು ಕೊರೆಯುತ್ತಿದ್ದ ಸಮೂದ್ ಗೋತ್ರದವರೊಂದಿಗೆ. وَثَمُودَ ٱلَّذِينَ جَابُوا۟ ٱلصَّخْرَ بِٱلْوَادِ. ﴿9﴾
10 ಗೂಟಗಳ ಒಡೆಯನಾದ ಫರೋಹ‍ನೊಂದಿಗೆ.[1]
[1] ಗೂಟಗಳ ಒಡೆಯ ಎಂದರೆ ಮಹಾ ಸೈನ್ಯವನ್ನು ಹೊಂದಿರುವವನು ಎಂದರ್ಥ. ಈತ ಜನರನ್ನು ಮೊಳೆ ಬಡಿದು ಶಿಕ್ಷಿಸುತ್ತಿದ್ದ ಎಂಬ ಅರ್ಥದಲ್ಲೂ ಈತನನ್ನು ಗೂಟಗಳ (ಮೊಳೆಗಳ) ಒಡೆಯ ಎಂದು ಕರೆಯಲಾಗಿರಬಹುದು.
وَفِرْعَوْنَ ذِى ٱلْأَوْتَادِ. ﴿10﴾
11 ಅವರೆಲ್ಲರೂ ಊರುಗಳಲ್ಲಿ ಅತಿರೇಕವೆಸಗುತ್ತಿದ್ದರು. ٱلَّذِينَ طَغَوْا۟ فِى ٱلْبِلَٰدِ. ﴿11﴾
12 ಕಿಡಿಗೇಡಿತನವನ್ನು ಅತಿಯಾಗಿ ಹಬ್ಬಿಸಿದ್ದರು. فَأَكْثَرُوا۟ فِيهَا ٱلْفَسَادَ. ﴿12﴾
13 ಕೊನೆಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಅವರೆಲ್ಲರ ಮೇಲೆ ಶಿಕ್ಷೆಯ ಕೊರಡನ್ನು ಸುರಿಸಿದನು. فَصَبَّ عَلَيْهِمْ رَبُّكَ سَوْطَ عَذَابٍ. ﴿13﴾
14 ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಗಾವಣೆಯಲ್ಲಿದ್ದಾನೆ.[1]
[1] ಅಂದರೆ ಅವನು ಎಲ್ಲವನ್ನೂ ಗಮನಿಸುತ್ತಿದ್ದಾನೆ. ಎಲ್ಲವೂ ಅವನ ನಿಗಾದಲ್ಲಿದೆ.
إِنَّ رَبَّكَ لَبِٱلْمِرْصَادِ. ﴿14﴾
15 ಮನುಷ್ಯನ ಸ್ಥಿತಿ ಹೇಗಿದೆಯೆಂದರೆ, ಅವನ ಪರಿಪಾಲಕನು (ಅಲ್ಲಾಹು) ಅವನನ್ನು ಪರೀಕ್ಷಿಸಿ ಅವನಿಗೆ ಗೌರವ ಮತ್ತು ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಗಣ್ಯ ವ್ಯಕ್ತಿಯಾಗಿ ಮಾಡಿದ್ದಾನೆ.” فَأَمَّا ٱلْإِنسَٰنُ إِذَا مَا ٱبْتَلَىٰهُ رَبُّهُۥ فَأَكْرَمَهُۥ وَنَعَّمَهُۥ فَيَقُولُ رَبِّىٓ أَكْرَمَنِ. ﴿15﴾
16 ಆದರೆ ಅವನು ಮನುಷ್ಯನನ್ನು ಪರೀಕ್ಷಿಸಿ ಅವನ ಉಪಜೀವನವನ್ನು ಇಕ್ಕಟ್ಟುಗೊಳಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ನಿಂದನಾರ್ಹನಾಗಿ ಮಾಡಿದ್ದಾನೆ.” وَأَمَّآ إِذَا مَا ٱبْتَلَىٰهُ فَقَدَرَ عَلَيْهِ رِزْقَهُۥ فَيَقُولُ رَبِّىٓ أَهَٰنَنِ. ﴿16﴾
17 ಇಲ್ಲವೇ ಇಲ್ಲ, ವಾಸ್ತವವಾಗಿ ನೀವು ಅನಾಥರಿಗೆ ಗೌರವ ನೀಡುವುದಿಲ್ಲ. كَلَّا ۖ بَل لَّا تُكْرِمُونَ ٱلْيَتِيمَ. ﴿17﴾
18 ಬಡವರಿಗೆ ಅನ್ನ ನೀಡಲು ಪರಸ್ಪರ ಉತ್ತೇಜಿಸುವುದಿಲ್ಲ. وَلَا تَحَٰٓضُّونَ عَلَىٰ طَعَامِ ٱلْمِسْكِينِ. ﴿18﴾
19 ನೀವು ಉತ್ತರಾಧಿಕಾರದ ಆಸ್ತಿಯನ್ನು ಬಾಚಿ ಬಾಚಿ ತಿನ್ನುತ್ತೀರಿ. وَتَأْكُلُونَ ٱلتُّرَاثَ أَكْلًۭا لَّمًّۭا. ﴿19﴾
20 ನೀವು ಧನವನ್ನು ಅತಿಯಾಗಿ ಪ್ರೀತಿಸುತ್ತೀರಿ. وَتُحِبُّونَ ٱلْمَالَ حُبًّۭا جَمًّۭا. ﴿20﴾
21 ಅಲ್ಲ (ನಿಮ್ಮ ಸ್ಥಿತಿ ಹಾಗಾಗಬಾರದು). ಭೂಮಿಯನ್ನು ಸಂಪೂರ್ಣ ಪುಡಿ ಮಾಡಿ ಸಮತಟ್ಟುಗೊಳಿಸುವಾಗ. كَلَّآ إِذَا دُكَّتِ ٱلْأَرْضُ دَكًّۭا دَكًّۭا. ﴿21﴾
22 ನಿಮ್ಮ ಪರಿಪಾಲಕನು (ಅಲ್ಲಾಹು) ಬರುವಾಗ ಮತ್ತು ಸಾಲುಸಾಲಾಗಿ ದೇವದೂತರು‍ಗಳು ಬರುವಾಗ. وَجَآءَ رَبُّكَ وَٱلْمَلَكُ صَفًّۭا صَفًّۭا. ﴿22﴾
23 ಆ ದಿನ ನರಕವನ್ನು ತರಲಾಗುವುದು. ಅಂದು ಮನುಷ್ಯನಿಗೆ ಮನವರಿಕೆಯಾಗುವುದು. ಆದರೆ ಆಗ ಮನವರಿಕೆಯಾಗುವುದರಿಂದ ಏನು ಪ್ರಯೋಜನ? وَجِا۟ىٓءَ يَوْمَئِذٍۭ بِجَهَنَّمَ ۚ يَوْمَئِذٍۢ يَتَذَكَّرُ ٱلْإِنسَٰنُ وَأَنَّىٰ لَهُ ٱلذِّكْرَىٰ. ﴿23﴾
24 ಅವನು ಹೇಳುವನು: “ಅಯ್ಯೋ! ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಸಿದ್ಧತೆಗಳನ್ನು ಮಾಡಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!” يَقُولُ يَٰلَيْتَنِى قَدَّمْتُ لِحَيَاتِى. ﴿24﴾
25 ಅಂದು ಅಲ್ಲಾಹು ನೀಡುವಂತಹ (ಕಠೋರ) ಶಿಕ್ಷೆಯನ್ನು ನೀಡಲು ಯಾರಿಗೂ ಸಾಧ್ಯವಿಲ್ಲ. فَيَوْمَئِذٍۢ لَّا يُعَذِّبُ عَذَابَهُۥٓ أَحَدٌۭ. ﴿25﴾
26 ಅವನು ಹಿಡಿದು ಬಂಧಿಸುವಂತೆ ಹಿಡಿದು ಬಂಧಿಸಲು ಯಾರಿಗೂ ಸಾಧ್ಯವಿಲ್ಲ. وَلَا يُوثِقُ وَثَاقَهُۥٓ أَحَدٌۭ. ﴿26﴾
27 ಓ ಸಮಾಧಾನದಲ್ಲಿರುವ ಆತ್ಮವೇ! يَٰٓأَيَّتُهَا ٱلنَّفْسُ ٱلْمُطْمَئِنَّةُ. ﴿27﴾
28 ನಿನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳು—ನೀನು ಅವನ ಬಗ್ಗೆ ಸಂಪ್ರೀತನಾಗಿರುವ ಮತ್ತು ಅವನು ನಿನ್ನ ಬಗ್ಗೆ ಸಂಪ್ರೀತನಾಗಿರುವ ಸ್ಥಿತಿಯಲ್ಲಿ. ٱرْجِعِىٓ إِلَىٰ رَبِّكِ رَاضِيَةًۭ مَّرْضِيَّةًۭ. ﴿28﴾
29 ನನ್ನ ವಿಶೇಷ ದಾಸರೊಡನೆ ಸೇರಿಕೋ. فَٱدْخُلِى فِى عِبَٰدِى. ﴿29﴾
30 ನನ್ನ ಸ್ವರ್ಗಕ್ಕೆ ಪ್ರವೇಶಿಸು. وَٱدْخُلِى جَنَّتِى. ﴿30﴾